ಬುಧವಾರ, ಮಾರ್ಚ್ 3, 2021
18 °C
255 ಕಿ.ಮೀ ಕ್ರಮಿಸಿದ ಪಂಚಮಸಾಲಿ ಶ್ರೀಗಳ ಪಾದಯಾತ್ರೆ

ಪಂಚಮಸಾಲಿ ಹೋರಾಟ ಹಿಂಸಾಚಾರಕ್ಕೆ ತಿರುಗಿದರೆ ಸರ್ಕಾರ ಹೊಣೆ: ಜಯಮೃತ್ಯುಂಜಯ ಶ್ರೀ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೂವಿನಹಡಗಲಿ: ‘ಲಿಂಗಾಯತ ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟದಲ್ಲಿ ಒಬ್ಬರು ಪ್ರಾಣ ತೆತ್ತಿದ್ದಾರೆ. ಬರುವ ದಿನಗಳಲ್ಲಿ ಈ ಹೋರಾಟ ಹಿಂಸಾಚಾರಕ್ಕೆ ತಿರುಗಿದರೆ ಅದಕ್ಕೆ ಸರ್ಕಾರವೇ ಹೊಣೆಯಾಗುತ್ತದೆ’ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಪೀಠಾಧಿಪತಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದರು.

2ಎ ಮೀಸಲಾತಿಗೆ ಆಗ್ರಹಿಸಿ ಪಂಚಲಕ್ಷ ಹೆಜ್ಜೆಗಳ ಪಾದಯಾತ್ರೆಯಲ್ಲಿ ಭಾನುವಾರ ಇಟ್ಟಿಗಿಗೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮೀಸಲಾತಿ ಹೋರಾಟದಲ್ಲಿ ಮೋರಿಗೇರಿಯ ತುಪ್ಪದ ಈಶಪ್ಪನವರ ಬಲಿದಾನ ಆಗಿದೆ. ಪಾದಯಾತ್ರೆ ಬೆಂಗಳೂರು ತಲುಪುವ ವೇಳೆ ಇನ್ನಷ್ಟು ಸಾವು ನೋವು ಸಂಭವಿಸಬಹುದು. ಮೀಸಲಾತಿಗಾಗಿ ಸಮುದಾಯವನ್ನು ಹೋರಾಟಕ್ಕೆ ಇಳಿಸಿದ ಸರ್ಕಾರವೇ ಇದರ ಹೊಣೆ ಹೊರಬೇಕು ಎಂದು ಪ್ರತಿಪಾದಿಸಿದರು.

ಹಿಂದುಳಿದ ವರ್ಗದ ಶೇ 15ರ ಮೀಸಲಾತಿಯಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲು ನೀಡಲು ಮುಖ್ಯಮಂತ್ರಿಗೆ ಪರಮಾಧಿಕಾರವಿದೆ. ಇದಕ್ಕೆ ಕುಲಶಾಸ್ತ್ರ ಅಧ್ಯಯನದ ಅವಶ್ಯಕತೆಯಾಗಲಿ, ಹಿಂದುಳಿದ ವರ್ಗಗಳ ವರದಿಯ ಪರಿಶೀಲಿಸುವ ಪ್ರಮೇಯ ಬರುವುದಿಲ್ಲ. ಹಿಂದೆ ಜಗದೀಶ ಶೆಟ್ಟರ್ ಮುಖ್ಯಮಂತ್ರಿ ಆಗಿದ್ದಾಗ ಬಣಜಿಗ ಸಮಾಜಕ್ಕೆ 2ಎ ಮೀಸಲಾತಿ ನೀಡಿದ್ದಾರೆ. ಗಾಣಿಗರಿಗೂ ಇದೇ ಮಾದರಿಯಲ್ಲಿ ಮೀಸಲಾತಿ ಕೊಟ್ಟಿದ್ದಾರೆ. ಪಂಚಮಸಾಲಿ ಸಮಾಜಕ್ಕೆ ಮಾತ್ರ ಏಕೆ ನೀಡುತ್ತಿಲ್ಲ ಎಂದು ಪ್ರಶ್ನಿಸಿದರು.

ಹಗರಿಬೊಮ್ಮನಹಳ್ಳಿ ತಾಲ್ಲೂಕು ನೆಲ್ಲುಕುದುರೆಯಿಂದ ಪಾದಯಾತ್ರೆ ಆರಂಭಿಸಿದ ಸ್ವಾಮೀಜಿಯನ್ನು ತಾಲ್ಲೂ ಕಿನ ಇಟ್ಟಿಗಿ ಗ್ರಾಮದ ಹೊರ ವಲಯದಲ್ಲಿ ಸಮುದಾಯದವರು ಮಲ್ಲಿಗೆ ಹೂ ಮೂಲಕ ಭವ್ಯವಾಗಿ ಸ್ವಾಗತಿಸಿದರು. ಅಪಾರ ಜನಸ್ತೋಮ ಪಾಲ್ಗೊಂಡಿದ್ದರಿಂದ 3 ಕಿ.ಮೀವರೆಗೆ ಸಂಚಾರ ದಟ್ಟಣೆ ಉಂಟಾಗಿತ್ತು. 11 ದಿನಗಳಲ್ಲಿ ಪಾದಯಾತ್ರೆ 255 ಕಿ.ಮೀ ಕ್ರಮಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು