ಸೋಮವಾರ, ನವೆಂಬರ್ 30, 2020
21 °C

ಪ್ರವಾಹ ಪರಿಹಾರ: ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಳೆ ಮತ್ತು ಪ್ರವಾಹದಿಂದಾಗಿ ಈ ವರ್ಷ ಕಳೆದ ವರ್ಷಕ್ಕಿಂತ ದುಪ್ಪಟ್ಟು ನಷ್ಟ ಸಂಭವಿಸಿದೆ.‌ ಹೀಗಿದ್ದರೂ ಬಿಎಸ್‌ವೈ ನೇತೃತ್ವದ ಸರ್ಕಾರ ಕೇಂದ್ರದ ಬಳಿ ಹೆಚ್ಚು ಪರಿಹಾರ ಕೇಳದೇ ರಾಜ್ಯಕ್ಕೆ ದ್ರೋಹ ಬಗೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.  

ಈ ವಿಚಾರವಾಗಿ ಸೋಮವಾರ ಸರಣಿ ಟ್ವೀಟ್‌ ಮಾಡಿರುವ ಅವರು, 'ಮಳೆ ಮತ್ತು ಪ್ರವಾಹದಿಂದಾಗಿ ಈ ವರ್ಷ ಕಳೆದ ವರ್ಷಕ್ಕಿಂತ ದುಪ್ಪಟ್ಟು ನಷ್ಟ ಸಂಭವಿಸಿದೆ.‌ ಹೀಗಿದ್ದರೂ ಬಿಎಸ್‌ವೈ ನೇತೃತ್ವದ ಸರ್ಕಾರ ಕೇಂದ್ರದ ಬಳಿ ಹೆಚ್ಚು ಪರಿಹಾರ ಕೇಳದೇ ರಾಜ್ಯಕ್ಕೆ ದ್ರೋಹ ಬಗೆಯುತ್ತಿದೆ. ಬಿ.ಎಸ್‌.ಯಡಿಯೂರಪ್ಪನವರು ತಕ್ಷಣ ಮರುಸಮೀಕ್ಷೆಗೆ ಆದೇಶಿಸಿ ವೈಜ್ಞಾನಿಕವಾಗಿ ನಷ್ಟದ ಅಂದಾಜು ಮಾಡಬೇಕು' ಎಂದು ಒತ್ತಾಯಿಸಿದ್ದಾರೆ.

'ಕಳೆದ ವರ್ಷ ಅತಿವೃಷ್ಟಿಯಿಂದ 9,94,556 ಹೆಕ್ಟೇರ್ ಬೆಳೆ ನಾಶ ಸೇರಿದಂತೆ  ಒಟ್ಟು ನಷ್ಟಕ್ಕೆ ₹25,518 ಕೋಟಿ ಪರಿಹಾರ ಕೇಳಿದ್ದ ಮುಖ್ಯಮಂತ್ರಿಗಳು, ಈ ಬಾರಿ 20,86,703 ಹೆಕ್ಟೇರ್ ಬೆಳೆ ನಾಶ ಸೇರಿದಂತೆ ಒಟ್ಟು ನಷ್ಟಕ್ಕೆ ₹24,941.73  ಕೋಟಿ ಪರಿಹಾರ ಕೇಳಿರುವುದು ರಾಜ್ಯಕ್ಕೆ ಮಾಡಿರುವ ಅನ್ಯಾಯ ಅಲ್ಲವೇ?' ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

'ಕಳೆದ ವರ್ಷ ₹25,518 ಕೋಟಿ ಪರಿಹಾರ ಕೇಳಿದರೂ ಪ್ರಧಾನಿ ಮೋದಿ ನೀಡಿರುವುದು ₹1652 ಕೋಟಿ ಮಾತ್ರ. ರಾಜ್ಯ ಸರ್ಕಾರ ಸಮರ್ಪಕ ಸಮೀಕ್ಷಾ ವರದಿ ಮೂಲಕ ಪ್ರಧಾನಿ ಮೇಲೆ ಒತ್ತಡ ಹೇರಿದರೆ ಮಾತ್ರ ಹೆಚ್ಚಿನ ಪರಿಹಾರ ಸಿಗಲು ಸಾಧ್ಯ' ಎಂದು ಅವರು ಹೇಳಿದ್ದಾರೆ.

'ಮಳೆ ಮತ್ತು ಪ್ರವಾಹ ಬಂದು ಮೂರು ತಿಂಗಳುಗಳಾಗುತ್ತಾ ಬಂದರೂ ಇಲ್ಲಿಯವರೆಗೆ 51,812 ಸಂತ್ರಸ್ಥರಿಗೆ ನೀಡಿರುವ ಪರಿಹಾರ ಕೇವಲ ₹36,57,79,972 ಮಾತ್ರ. ಎರಡನೇ ಹಂತದಲ್ಲಿ ಗುರುತಿಸಲಾದ 85,996 ಸಂತ್ರಸ್ತರಿಗೆ ₹70,70,87,961 ಪರಿಹಾರ ಇನ್ನಷ್ಟೇ ನೀಡಬೇಕಾಗಿದೆ. ಹೀಗಾದರೇ, ಉಳಿದವರ ಗತಿ ಏನು‌?' ಎಂದು ರಾಜ್ಯ ಸರ್ಕಾರವನ್ನು ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು