ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಶಾಲೆಗಳಲ್ಲಿ ನಿಗದಿಪಡಿಸಿರುವ ಸಮವಸ್ತ್ರ ಕಡ್ಡಾಯ: ರಾಜ್ಯ ಸರ್ಕಾರದ ಆದೇಶ

Last Updated 5 ಫೆಬ್ರುವರಿ 2022, 13:40 IST
ಅಕ್ಷರ ಗಾತ್ರ

ಬೆಂಗಳೂರು: ‘ಶಿರವಸ್ತ್ರ ಹಾಕಿಕೊಂಡು ಅಥವಾ ತಲೆಯನ್ನು ಮುಚ್ಚಿಕೊಂಡು ಶಾಲೆಗೆ ಬರದಂತೆ ತಡೆಯುವುದು ಸಂವಿಧಾನದ ಉಲ್ಲಂಘನೆ ಅಲ್ಲವೆಂದು ಸುಪ್ರೀಂ ಕೋರ್ಟ್‌ ಮತ್ತು ವಿವಿಧ ರಾಜ್ಯಗಳ ಹೈಕೋರ್ಟ್‌ಗಳು ಈಗಾಗಲೇ ತೀರ್ಪು ನೀಡಿವೆ. ಹೀಗಾಗಿ, ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಆಡಳಿತ ಮಂಡಳಿಗಳು ನಿರ್ಧರಿಸುವ ಸಮವಸ್ತ್ರವನ್ನೇ ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ಧರಿಸಬೇಕು ಎಂದೂ ಆದೇಶದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.

ಪದವಿಪೂರ್ವ ಶಿಕ್ಷಣ ಇಲಾಖೆಯ ವ್ಯಾಪ್ತಿಯ ಎಲ್ಲ ಕಾಲೇಜುಗಳಲ್ಲಿ ಆಯಾ ಕಾಲೇಜುಗಳ ಕಾಲೇಜು ಅಭಿವೃದ್ಧಿ ಮಂಡಳಿ (ಸಿಡಿಸಿ) ಅಥವಾ ಆಡಳಿತ ಮಂಡಳಿಗಳ ಮೇಲ್ವಿಚಾರಣಾ ಸಮಿತಿಯು ನಿರ್ಧರಿಸುವ ಸಮವಸ್ತ್ರ ಧರಿಸಬೇಕು. ಆಡಳಿತ ಮಂಡಳಿಗಳು ಸಮವಸ್ತ್ರಗಳನ್ನು ನಿಗದಿಪಡಿಸದೇ ಇದ್ದರೆ ಸಮಾನತೆ ಮತ್ತು ಏಕತೆಯನ್ನು ಕಾಪಾಡಿಕೊಂಡು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಆಗದಂತೆ ಉಡುಪು ಧರಿಸಬೇಕು ಎಂದೂ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT