ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ವಿವಿಧ ಸಕ್ಕರೆ ಕಾರ್ಖಾನೆಗಳ ಮೇಲೆ ಅಧಿಕಾರಿಗಳ ದಾಳಿ, ತೂಕ ಪರಿಶೀಲನೆ

Last Updated 14 ಡಿಸೆಂಬರ್ 2022, 10:55 IST
ಅಕ್ಷರ ಗಾತ್ರ

ವಿಜಯಪುರ: ರಾಜ್ಯದಹಲವು ಸಕ್ಕರೆ ಕಾರ್ಖಾನೆಗಳಿಗೆ ಬುಧವಾರ ಸರ್ಕಾರಿ ಅಧಿಕಾರಿಗಳು ಭೇಟಿ ನೀಡಿ ತೂಕದಲ್ಲಿನ ಮೋಸದ ಕುರಿತು ತಪಾಸಣೆ ನಡೆಸಿದರು.

ವಿಜಯಪುರದ ಆಲಮೇಲದ ಕೆಪಿಆರ್‌ ಸಕ್ಕರೆ ಕಾರ್ಖಾನೆ, ಹಾವಿನಾಳದ ಇಂಡಿಯನ್‌ ಸಕ್ಕರೆ ಕಾರ್ಖಾನೆ, ನಾದ ಕೆ.ಡಿ.ಯ ಜಮಖಂಡಿ ಸಕ್ಕರೆ ಕಾರ್ಖಾನೆ ಮತ್ತು ಕಾರಜೋಳದ ಬಸವೇಶ್ವರ ಸಕ್ಕರೆ ಕಾರ್ಖಾನೆಯಲ್ಲಿ ಮಂಗಳವಾರ ಆಹಾರ ಇಲಾಖೆ, ಪೊಲೀಸ್‌, ಕೆಎಸ್‌ಎಫ್‌ಸಿ ಸಿಬ್ಬಂದಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದು, ಯಾವೊಂದು ಕಾರ್ಖಾನೆಯಲ್ಲೂ ತೂಕ, ಅಳತೆಯಲ್ಲಿ ಮೋಸವಾಗುತ್ತಿರುವುದು ತಪಾಸಣೆ ವೇಳೆ ಕಂಡುಬಂದಿಲ್ಲ ಎಂದು ವಿಜಯಪುರ ಜಿಲ್ಲಾ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕ ಸಿದ್ದರಾಮ ಮಾರಿಹಾಳ ‘ಪ್ರಜಾವಾಣಿ’ಗೆ ಖಚಿತ ಪಡಿಸಿದ್ದಾರೆ.

ಹಳಿಯಾಳದಲ್ಲೂ ದಾಳಿ:

ಹಳಿಯಾಳದ ಇ.ಐ.ಡಿ. ಪ್ಯಾರಿ ಸಕ್ಕರೆ ಕಾರ್ಖಾನೆ ಮೇಲೆ ದಾಳಿ ನಡೆಸಿ ತೂಕ ವ್ಯತ್ಯಾಸದ ಕುರಿತು ಪರಿಶೀಲನೆ ನಡೆಸಲಾಗಿದೆ. ಆದರೆ, ಅಳತೆಯಲ್ಲಿ ವಂಚಿಸುತ್ತಿರುವುದು ಮೇಲ್ನೋಟಕ್ಕೆ ಕಂಡುಬಂದಿಲ್ಲ. ಪರಿಶೀಲನೆ ಮುಂದುವರೆಸಿದ್ದೇವೆ' ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಮಂಜುನಾಥ ರೇವಣಕರ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT