ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಎಲ್ಲ ಶಾಲೆ, ಪದವಿಪೂರ್ವ ಕಾಲೇಜುಗಳಲ್ಲಿ ರಾಷ್ಟ್ರಗೀತೆ ಕಡ್ಡಾಯ

Last Updated 17 ಆಗಸ್ಟ್ 2022, 21:43 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಎಲ್ಲ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಲ್ಲೂ ಪ್ರತಿದಿನ ಮುಂಜಾನೆ ಸಾಮೂಹಿಕ ಪ್ರಾರ್ಥನೆಸಮಯದಲ್ಲಿ ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

ಕರ್ನಾಟಕ ಶಿಕ್ಷಣ ಕಾಯ್ದೆ 1983ರ ಪ್ರಕಾರ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯ. ಕೆಲವು ಶಾಲೆಗಳಲ್ಲಿ ನಿಯಮ ಉಲ್ಲಂಘಿಸಲಾಗುತ್ತಿದೆ ಎಂಬ ದೂರುಗಳು ಬಂದಿವೆ. ಅದಕ್ಕೆ ಅವಕಾಶ ನೀಡಬಾರದು ಎಂದು ತಾಕೀತು ಮಾಡಲಾಗಿದೆ.

ವಿದ್ಯಾರ್ಥಿಗಳಲ್ಲಿ ನಾಗರಿಕ ಪ್ರಜ್ಞೆ ಬೋಧಿಸುವುದು, ಸಂವಿಧಾನ ಅನು ಸರಿಸುವುದು, ಸಂವಿಧಾನದ ಆದರ್ಶಗಳನ್ನು ಪಾಲಿಸುವುದು, ಸಾಂವಿಧಾನಿಕ ಸಂಸ್ಥೆಗಳನ್ನು, ರಾಷ್ಟ್ರಧ್ವಜ, ರಾಷ್ಟ್ರಗೀತೆ ಗೌರವಿಸುವಂತೆ ಮಾಡಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಮೈದಾನದ ಕೊರತೆ ಇದ್ದರೆ, ಕೊಠಡಿಗಳಲ್ಲೇ ಹಾಡಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT