ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಸರ್ಕಾರ, ಬಿಎಸ್‌ವೈ ಸರ್ಕಾರ ಎಂದು ಕರೆಯುವುದನ್ನು ಪ್ರಶ್ನಿಸಿ ಅರ್ಜಿ

Last Updated 25 ಜನವರಿ 2021, 20:16 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಮುಖ್ಯಮಂತ್ರಿ ಮತ್ತು ಪ್ರಧಾನ ಮಂತ್ರಿ ಹೆಸರಿನಲ್ಲಿ ಮಾಧ್ಯಮಗಳಲ್ಲಿ ಸಂಬೋಧಿಸುವುದನ್ನು ತಡೆಯುವ ಸಂಬಂಧ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ವಿಲೇವಾರಿ ಮಾಡಿದೆ.

‘ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳು ರಾಜ್ಯ ಸರ್ಕಾರವನ್ನು ‘ಯಡಿಯೂರಪ್ಪ ಸರ್ಕಾರ’ ಮತ್ತು ಕೇಂದ್ರ ಸರ್ಕಾರವನ್ನು ‘ಮೋದಿ ಸರ್ಕಾರ’ ಎಂದು ಉಲ್ಲೇಖಿಸುತ್ತಿವೆ. 2020 ಮೇ 15ರಂದು ಪಿಐಬಿ(ಪ್ರೆಸ್ ಇನ್‌ಫರ್ಮೇಷನ್ ಬ್ಯೂರೊ) ಹೊರಡಿಸಿರುವ ಪ್ರಕಟಣೆಯಲ್ಲೂ ಇದೇ ರೀತಿ ದಾಖಲಾಗಿದೆ’ ಎಂದು ಎ.ಮಲ್ಲಿಕಾರ್ಜುನ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಈ ವಿಷಯದಲ್ಲಿ ನಿರ್ದಿಷ್ಟ ರೀತಿಯಲ್ಲಿ ನಿರ್ದೇಶನ ನೀಡಲು ಆಗುವುದಿಲ್ಲ. ಈ ರೀತಿಯ ಪದಪ್ರಯೋಗ ಬೇಡ ಎಂಬುದರ ಕುರಿತು ಪಿಐಬಿಗೆ ಮನವಿ ಸಲ್ಲಿಸಲು ಅರ್ಜಿದಾರರಿಗೆ ಮುಕ್ತ ಅವಕಾಶ ಇದೆ’ ಎಂದು ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT