ಚಿತ್ರದುರ್ಗ: ದಕ್ಷ, ಪ್ರಾಮಾಣಿಕ ಹಾಗೂ ಸುಭದ್ರವಾಗಿ ಸರ್ಕಾರವನ್ನು ನಡೆಸುತ್ತಿದ್ದೇವೆ, ಮ್ಯಾನೇಜ್ ಮಾಡುತ್ತಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಸರ್ಕಾರವೂ ಉತ್ತಮವಾಗಿ ನಡೆಯುತ್ತಿದೆ. ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರ ಹೇಳಿಕೆಗೆ ಮತ್ತೊಂದು ಅರ್ಥ ಕಲ್ಪಿಸಲು ಇಷ್ಟಪಡುವುದಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಅಭಿವೃದ್ಧಿಗೆ ಪೂರಕವಾದ ಆಡಳಿತ ನೀತ್ತಿದ್ದಾರೆ. ಸಮರ್ಥ ಮತ್ತು ದಕ್ಷವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿರೋಧ ಪಕ್ಷದ ನಾಯಕರನ್ನು ಕೇಳಿ ಸರ್ಕಾರ ನಡೆಸುವ ಸ್ಥಿತಿ ಬಿಜೆಪಿಗೆ ಬಂದಿಲ್ಲ. ಸಿದ್ದರಾಮಯ್ಯ ಅವರು ನಾಲಿಗೆ ಬಿಗಿಹಿಡಿದು ಮಾತನಾಡಬೇಕು’ ಎಂದು ಹರಿಹಾಯ್ದರು.

ಜವಾಹರಲಾಲ್ ನೆಹರೂ ಅವರ ಭಾವಚಿತ್ರ ಕೈಬಿಟ್ಟಿರುವುದಕ್ಕೆ ಸಂಬಂಧಿಸಿದ ಜಾಹೀರಾತು ಗಮನಿಸಿಲ್ಲ. ಆದರೆ, ನೆಹರೂ ಭಾವಚಿತ್ರವನ್ನು ಬಳಕೆ ಮಾಡಬೇಕಿತ್ತು.

-ಬಿ.ಸಿ.ಪಾಟೀಲ, ಕೃಷಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.