ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆ ನೇಮಕಾತಿ: ಸುಗಮವಾಗಿ ನಡೆದ ಸಿಇಟಿ

Last Updated 21 ಮೇ 2022, 19:45 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ (ಪದವೀಧರ) ಹುದ್ದೆಗಳ ನೇಮಕಾತಿಗೆ ಶನಿವಾರ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಸುಗಮವಾಗಿ ನಡೆದಿದ್ದು, 69,159 ಅಭ್ಯರ್ಥಿಗಳು ಹಾಜರಾಗಿದ್ದರು.

15 ಸಾವಿರ ಹುದ್ದೆಗಳಿಗೆ ನಡೆದ ಪರೀಕ್ಷೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಶಿಕ್ಷಣ ಇಲಾಖೆ ಕೈಗೊಂಡಿತ್ತು. ಪರೀಕ್ಷೆಗೆ 1.06 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಇವರಲ್ಲಿ 31,967 ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಅರ್ಜಿಗಳನ್ನು ಸಲ್ಲಿಸಿದ್ದರು. ಹೀಗಾಗಿ, 74,116 ಅರ್ಜಿಗಳನ್ನು ಪರೀಕ್ಷೆಗೆ ಪರಿಗಣಿಸಲಾಗಿತ್ತು.

2 ದಿನಗಳ ಪರೀಕ್ಷೆಯ ಮೊದಲ ದಿನವಾದ ಶನಿವಾರ 4,857 ಅಭ್ಯರ್ಥಿಗಳು ಗೈರು ಹಾಜರಾಗಿದ್ದರು. ಅಭ್ಯರ್ಥಿಗಳಿಗೆ ಮೊಬೈಲ್‌ ದೂರವಾಣಿ, ಬ್ಲ್ಯೂಟೂಥ್‌, ಕೈಗಡಿಯಾರ ಸೇರಿ ಯಾವುದೇ ರೀತಿ ಎಲೆಕ್ಟ್ರಾನಿಕ್‌ ಸಾಧನಗಳನ್ನು ನಿರ್ಬಂಧ ವಿಧಿಸಲಾಗಿತ್ತು. ಪರೀಕ್ಷಾ ಕೊಠಡಿಗೆ ತೆರಳುವ ಮುನ್ನ ಅಭ್ಯರ್ಥಿಗಳನ್ನು ಸಂಪೂರ್ಣವಾಗಿ ತಪಾಸಣೆಗೆ ಒಳಪಡಿಸಲಾಯಿತು.

ರಾಜ್ಯದ 435 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT