ಬುಧವಾರ, ಮೇ 18, 2022
23 °C

ಗಲಭೆ ತಡೆಯಲು ಸರ್ಕಾರ ಬಿಗಿ ಕ್ರಮ ಕೈಗೊಳ್ಳಬೇಕು: ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಗಲಭೆ ತಡೆಯಲು ಸರ್ಕಾರ ಬಿಗಿ ಕ್ರಮ ಕೈಗೊಳ್ಳಬೇಕು. ಗಲಭೆಗೆ ಯಾರೇ ಕಾರಣ ಆಗಿದ್ದರೂ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಶಾಸಕ ಬಿ.ಎಸ್.ಯಡಿಯೂರಪ್ಪ ಸಲಹೆ ನೀಡಿದರು.

ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ರೀತಿಯ ಗಲಭೆಗಳು ರಾಜ್ಯದಲ್ಲಿ ನಡೆಯಬಾರದು‌. ಗಲಭೆಗೆ ಗೃಹ ಸಚಿವ, ಮುಖ್ಯಮಂತ್ರಿ ಹೊಣೆಯಲ್ಲ ಎಂದು ಹೇಳಿದರು.

ಮುಂಬರುವ ಚುನಾವಣೆ ಕುರಿತು ಹೊಸಪೇಟೆಯ ಕಾರ್ಯಕಾರಿಣಿಯಲ್ಲಿ ಸುದೀರ್ಘ ಚರ್ಚೆ ನಡೆಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಗಳನ್ನು ಮನೆಮನೆಗೆ ತಲುಪಿಸುತ್ತೇವೆ. 150ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಗೆದ್ದು ಬಿಜೆಪಿ ಅಧಿಕಾರಕ್ಕೆ ತರುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು