ಶನಿವಾರ, ಸೆಪ್ಟೆಂಬರ್ 24, 2022
24 °C

ಖಾಸಗಿ ವಿವಿ ಮಾನ್ಯತೆ; ಕಡಿವಾಣಕ್ಕೆ ಚಿಂತನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಖಾಸಗಿ ಕಾಲೇಜುಗಳಿಗೆ ಡೀಮ್ಡ್‌ ವಿಶ್ವವಿದ್ಯಾಲಯದ ಮಾನ್ಯತೆ ನೀಡುವ ಪ್ರಕ್ರಿಯೆಗೆ ತಾತ್ಕಾಲಿಕವಾಗಿ ಕಡಿವಾಣ ಹಾಕಲು ಸರ್ಕಾರ ಚಿಂತನೆ ನಡೆಸಿದೆ.

ರಾಜ್ಯದಲ್ಲಿ ಪ್ರಸ್ತುತ 34 ಸರ್ಕಾರಿ, 23 ಖಾಸಗಿ ವಿಶ್ವವಿದ್ಯಾಲಯಗಳಿವೆ. ವಿಶ್ವವಿದ್ಯಾಲಯದ ಮಾನ್ಯತೆ ಕೋರಿ ಸಲ್ಲಿಕೆಯಾಗಿರುವ 5 ಅರ್ಜಿಗಳು ಪ್ರಕ್ರಿಯೆ ಹಂತದಲ್ಲಿವೆ. 3 ಅರ್ಜಿಗಳು ಹೊಸ ದಾಗಿ ಸಲ್ಲಿಕೆಯಾಗಿವೆ. ಪ್ರತಿ ವರ್ಷವೂ ಸಲ್ಲಿಕೆಯಾಗುವ ಅರ್ಜಿಗಳ ಸಂಖ್ಯೆ ಹೆಚ್ಚು ತ್ತಿದ್ದು, ಶಿಕ್ಷಣದ ಗುಣಮಟ್ಟ ಕುಸಿಯುವ ಆತಂಕದಿಂದಾಗಿ ಹೊಸ ಅರ್ಜಿಗಳನ್ನು ಸದ್ಯಕ್ಕೆ ಪುರಸ್ಕರಿಸದೆ ಇರಲು ಚಿಂತನೆ ನಡೆದಿದೆ ಎಂದು ಉನ್ನತ ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.

‘ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಆಡಳಿತ ಮಂಡಳಿ ಮಧ್ಯದ ವಿವಾದ, ವಿದ್ಯಾರ್ಥಿಗಳಿಗೆ ಆಗುವ ಅನನುಕೂಲ ಮತ್ತಿತರ ಸಮಯದಲ್ಲಿ ಸರ್ಕಾರ ಮಧ್ಯೆಪ್ರವೇಶಿಸಿ, ನಿರ್ಧಾರ ತೆಗೆದುಕೊಳ್ಳುವ ಅವಕಾಶ ಕಡಿಮೆ ಇವೆ. ಡೀಮ್ಡ್‌ ವಿಶ್ವ ವಿದ್ಯಾಲಯಗಳಿಗೆ ಪ್ರತ್ಯೇಕ ಮಸೂದೆ ರೂಪಿಸುವ ಪ್ರಕ್ರಿಯೆ ನಡೆಯುತ್ತಿದೆ. ಅಲ್ಲಿಯವರೆಗೂ ಹೊಸ ಅರ್ಜಿಗಳನ್ನು ಪರಿಗಣಿಸದಿರಲು ನಿರ್ಧರಿಸಲಾಗಿದೆ’ ಎನ್ನುವುದು ಅಧಿಕಾರಿಗಳ ವಿವರಣೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು