ಭಾನುವಾರ, ಮೇ 9, 2021
27 °C

ಸಾರಿಗೆ ನೌಕರರು ಕೆಲಸಕ್ಕೆ ಬರದಿದ್ದರೆ ವೇತನ ಕಡಿತ: ಸಿಎಂ ಬಿಎಸ್‌ವೈ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುದಗಲ್‌ (ರಾಯಚೂರು ಜಿಲ್ಲೆ): ‘ಸಾರಿಗೆ ನೌಕರರು ಕೂಡಲೇ ಕರ್ತವ್ಯಕ್ಕೆ ಹಾಜರಾಗದಿದ್ದರೆ ವೇತನ ಕಡಿತ ಮಾಡುವುದರ ಜತೆಗೆ ಶಿಸ್ತು ಕ್ರಮ ಜರುಗಿಸಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಸಿದರು.

ಉಪಚುನಾವಣೆ ಪ್ರಚಾರಕ್ಕೆ ಬಂದಿರುವ ಅವರು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಮುಷ್ಕರಕ್ಕೆ ಸಂಬಂಧಿಸಿ ಯಾರನ್ನೂ ಮಾತುಕತೆಗೆ ಕರೆಯವುದಿಲ್ಲ. ಈ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ನೌಕರರು ಗೌರವದಿಂದ ಕೆಲಸಕ್ಕೆ ಹಾಜರಾಬೇಕು. ಸಾರಿಗೆ ವ್ಯವಸ್ಥೆಯಿಂದ ಮುಂದಾಗುವ ಅನಾಹುತಗಳಿಗೆ ಅವರೇ ಹೊಣೆಯಾಗುತ್ತಾರೆ’ ಎಂದು ಎಚ್ಚರಿಸಿದರು.

ಜನರು ಈ ಬಾರಿಯೂ ಉತ್ತಮ ತೀರ್ಪು ಕೊಡುತ್ತಾರೆ. ಬಿಜೆಪಿ ಬಗ್ಗೆ ಹಗುರವಾಗಿ ಮಾತನಾಡುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರಿಗೆ ಸಂದೇಶ ಕೊಡಲಿದ್ದಾರೆ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು