ಯಲಹಂಕ: ‘ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಜನರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದೊಂದು ಕಣ್ಣು, ಕಿವಿ ಇಲ್ಲದ ಸರ್ಕಾರ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಟೀಕಿಸಿದರು.

ಯಲಹಂಕ ಕ್ಷೇತ್ರದ ಕಾಂಗ್ರೆಸ್ ಘಟಕದ ವತಿಯಿಂದ ನಿಸರ್ಗ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಬಡವರಿಗೆ ದಿನಸಿ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ರಾಜ್ಯ ಸರ್ಕಾರ ಕೋಟಿಗಟ್ಟಲೆ ಪರಿಹಾರ ಘೋಷಿಸಿ, ಮೂರು ವಾರ ಕಳೆದಿದೆ. ಈವರೆಗೆ ಯಾರಿಗೂ ಹಣ ನೀಡಿಲ್ಲ. ಕೇವಲ ಘೋಷಣೆಗಳಿಗಷ್ಟೇ ಈ ಸರ್ಕಾರ ಸೀಮಿತ. ಯಾವುದೂ ಕಾರ್ಯರೂಪಕ್ಕೆ ಬರುತ್ತಿಲ್ಲ’ ಎಂದು ಆರೋಪಿಸಿದರು.

ಶಾಸಕ ಕೃಷ್ಣಬೈರೇಗೌಡ,‘ಬಿಜೆಪಿ ಸರ್ಕಾರ ಜನರಿಗೆ ಪರಿಹಾರ ನೀಡುವುದಾಗಿ ಘೋಷಣೆಗಳನ್ನು ಮಾಡಿ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದೆಯೇ ಹೊರತು, ಬಡಜನರ ಬಗ್ಗೆ ಕಾಳಜಿಯೇ ಇಲ್ಲ. ದುಡಿಮೆ ಇಲ್ಲದ ಸಮಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಸಿ ಸಂಕಷ್ಟಕ್ಕೆ ಸಿಲುಕಿಸಿದೆ’ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.