ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರ್ಮಿಕ ಕಟ್ಟಡಗಳ ರಕ್ಷಣಾಮಸೂದೆಗೆ ರಾಜ್ಯಪಾಲ ಅಂಕಿತ

Last Updated 23 ಅಕ್ಟೋಬರ್ 2021, 20:03 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿರುವ ‘ಅನಧಿಕೃತ ಧಾರ್ಮಿಕ ಕಟ್ಟಡ'ಗಳನ್ನು ರಕ್ಷಿಸುವ ಸಲುವಾಗಿ ಜಾರಿಗೆ ತರಲು ಉದ್ದೇಶಿಸಿದ`ಕರ್ನಾಟಕ ಧಾರ್ಮಿಕ ಕಟ್ಟಡಗಳ (ಸಂರಕ್ಷಣೆ) ಕಾಯ್ದೆ–2021’ಯ ಮಸೂದೆಗೆ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅಂಕಿತ ಹಾಕಿದ್ದಾರೆ.

ರಾಜ್ಯದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನು, ನ್ಯಾಯಾಲಯ, ನ್ಯಾಯಮಂಡಳಿ, ಪ್ರಾಧಿಕಾರದ ಯಾವುದೇ ತೀರ್ಪು, ಪ್ರತಿಬಂಧಕ (ಡಿಕ್ರಿ) ಅಥವಾ ಆದೇಶ ಇದ್ದರೂ ಕಾಯ್ದೆ ಜಾರಿಯಾದ ದಿನದವರೆಗೆ ಅಸ್ತಿತ್ವದಲಿರುವ ಧಾರ್ಮಿಕ ಕಟ್ಟಡಗಳನ್ನು (ದೇವಸ್ಥಾನ, ಚರ್ಚ್, ಮಸೀದಿ, ಗುರುದ್ವಾರ, ಬೌದ್ಧ ವಿಹಾರ, ಮಜರ್ ಇತರೆ) ಸಂರಕ್ಷಿಸಲು ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಆದರೆ ತೆರವಿಗೆ ಸಂಬಂಧಪಟ್ಟಂತೆ ಯಾವುದೇ ಪ್ರಕರಣವು ಯಾವುದೇ ನ್ಯಾಯಾಲಯದಲ್ಲಿ ಇತ್ಯರ್ಥದ ಹಂತದಲ್ಲಿದ್ದರೆ ಸಂರಕ್ಷಿಸುವಂತಿಲ್ಲ ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.

ಸರ್ಕಾರ ಅಥವಾ ಯಾವುದೇ ಸ್ಥಳೀಯ ಪ್ರಾಧಿಕಾರವು ಭವಿಷ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಧಾರ್ಮಿಕ ಕಟ್ಟಡ ನಿರ್ಮಾಣಕ್ಕೆ ಸೂಕ್ತ ಪರವಾನಗಿ ಇಲ್ಲದೆ
(ಅನಧಿಕೃತವಾಗಿ ನಿರ್ಮಾಣಕ್ಕೆ) ಅವಕಾಶ ನೀಡುವಂತೆ ಇಲ್ಲ. ಆದರೆ ರೂಢಿ, ರಿವಾಜು, ಕಾನೂನು ಹಾಗೂ ಸರ್ಕಾರ ಆಗಾಗ ವಿಧಿಸುವ ಷರತ್ತುಗಳಿಗೆ ಒಳಪಟ್ಟಂತೆ ಸಂರಕ್ಷಿತ ಕಟ್ಟಡಗಳಲ್ಲಿ ಧಾರ್ಮಿಕ ಚಟುವಟಿಕೆ ನಡೆಸಲು ಜಿಲ್ಲಾಡಳಿತ ಅವಕಾಶ
ಕಲ್ಪಿಸಲು ಕಾಯ್ದೆಯಲ್ಲಿ ಅವಕಾಶ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT