ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್-19 ಲಸಿಕೆ ಪಡೆದ ರಾಜ್ಯಪಾಲ ವಜುಭಾಯಿ ವಾಲಾ

Last Updated 3 ಮಾರ್ಚ್ 2021, 15:13 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯಪಾಲ ವಜುಭಾಯಿ ವಾಲಾ ನಿನ್ನೆ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಮೊದಲನೇ ಹಂತದ ಕೋವಿಡ್-19 ಲಸಿಕೆಯನ್ನು ಪಡೆದಿದ್ದಾರೆ.

ಆಸ್ಪತ್ರೆಯ ನರ್ಸ್ ಶ್ರೀಮತಿ ವೇದ ಅವರು ರಾಜ್ಯಪಾಲರಿಗೆ ಕೋವಿಶೀಲ್ಡ್ ಲಸಿಕೆ ನೀಡಿದ್ದು, ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಬಿ.ಆರ್. ವೆಂಕಟೇಶಯ್ಯ ಮೇಲುಸ್ತುವಾರಿ ವಹಿಸಿದರು.

ಕೋವಿಡ್‌–19 ತಡೆಗೆ ಜಗತ್ತಿನ ಅತಿ ದೊಡ್ಡ ಲಸಿಕಾ ಕಾರ್ಯಕ್ರಮಕ್ಕೆ ಸೋಮವಾರ ದೇಶದಾದ್ಯಂತ ಚಾಲನೆ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌, ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಮುಂತಾದ ಅನೇಕ ಗಣ್ಯರು ಕೋವಿಡ್‌–19 ಲಸಿಕೆಯ ಮೊದಲ ಡೋಸ್‌ ಹಾಕಿಸಿಕೊಂಡಿದ್ದಾರೆ.

60 ವರ್ಷ ವಯಸ್ಸಿಗೂ ಮೇಲ್ಪಟ್ಟವರು ಹಾಗೂ ಇತರ ಗಂಭೀರ ಕಾಯಿಲೆಗಳಿಂದ ಬಳಲುವ, 45 ವರ್ಷಕ್ಕೂ ಮೇಲ್ಪಟ್ಟವರಿಗೆ ಈ ಹಂತದಲ್ಲಿ ಲಸಿಕೆ ಹಾಕಲಾಗುತ್ತದೆ. ಸುಮಾರು 27 ಕೋಟಿ ಜನರು ಇದರ ಲಾಭ ಪಡೆಯಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT