ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಂದಾಯ ಇಲಾಖೆಯ ಕಾಗದ ಪತ್ರಗಳಲ್ಲಿ ದಾಖಲೆ ತಿದ್ದಿದರೆ ಕ್ರಿಮಿನಲ್‌ ಕೇಸ್‌: ಕಾರಜೋಳ

Last Updated 21 ಸೆಪ್ಟೆಂಬರ್ 2022, 14:30 IST
ಅಕ್ಷರ ಗಾತ್ರ

ಬೆಂಗಳೂರು: ಕಂದಾಯ ಇಲಾಖೆಯ ಕಾಗದ ಪತ್ರಗಳಲ್ಲಿ ಹೆಸರು ಬದಲಾವಣೆ ಮಾಡಿದರೆ ಅವರು ಅಪರಾಧಿಗಳಾಗುತ್ತಾರೆ. ಬದಲಾವಣೆ ಮಾಡಿಕೊಟ್ಟವರೂ ಅಪರಾಧಿಗಳಾಗುತ್ತಾರೆ. ಅಂತಹವರನ್ನು ಅಮಾನತು ಮಾಡಿ, ಕ್ರಿಮಿನಲ್‌ ಕೇಸ್‌ ದಾಖಲಿಸುತ್ತೇವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಯಾದಗಿರಿ ಜಿಲ್ಲೆ ಕೊಡೆಕಲ್‌ ಗ್ರಾಮದಲ್ಲಿ ಸರ್ವೆ ಸಂಖ್ಯೆ 72 ರಲ್ಲಿ 15 ಎಕರೆ 10 ಗುಂಟೆ ಜಮೀನನ್ನು ಕೃಷ್ಣ ಭಾಗ್ಯ ಜಲ ನಿಗಮ ಯೋಜನೆ ತೆಗೆದುಕೊಂಡು ಪರಿಹಾರವನ್ನು ಕೊಟ್ಟಿದ್ದಾರೆ. ಅಲ್ಲಿನ ತಹಶೀಲ್ದಾರ್‌ ಹಾಗೂ ಅವರ ಸಿಬ್ಬಂದಿ ಸೇರಿ ಭ್ರಷ್ಟಾಚಾರ ಉದ್ದೇಶದಿಂದ ಖಾಸಗಿ ವ್ಯಕ್ತಿಗಳಾದ ಬಸಮ್ಮ ಕೋಂ ಚನ್ನಮಲ್ಲಪ್ಪ ಅದ್ನೂರಾ ಎಂಬ ಹೆಸರಿನಲ್ಲಿ ಪಹಣಿ ಬದಲಾಯಿಸಿ, ಹೆಸರು ಬದಲಾವಣೆ ಮಾಡಿದ್ದಾರೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕಾರಜೋಳ, ‘ಭೂಸ್ವಾದೀನವನ್ನು ಕಂದಾಯ ಇಲಾಖೆ ಅಧಿಕಾರಿಗಳೇ ಮಾಡಬೇಕು. ಅಕ್ರಮ ಎಸಗಿದ್ದರೆ ತಹಶೀಲ್ದಾರರೇ ಆಗಿರಬಹುದು, ಕೆಳಗಿನ ನೌಕರರೇ ಇರಬಹುದು. ಅವರ ವಿರುದ್ಧ ಖಂಡಿತಾ ಕ್ರಮ ತೆಗೆದುಕೊಳ್ಳುತ್ತೇನೆ. ಅವರನ್ನು ಅಮಾನತು ಮಾಡಿ, ಹಣವನ್ನು ವಾಪಸ್‌ ಪಡೆಯಲು ಜಿಲ್ಲಾಧಿಕಾರಿಗೆ ಹೇಳುತ್ತೇನೆ. ಕ್ರಿಮಿನಲ್‌ ಕೇಸ್‌ ಹಾಕಲು ಜಿಲ್ಲಾಧಿಕಾರಿಗೆ ಸೂಚನೆ ಕೊಡುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT