ಸೋಮವಾರ, ಆಗಸ್ಟ್ 8, 2022
21 °C

ಸಿಬ್ಬಂದಿ ಮುಷ್ಕರ ಸರಿಯಲ್ಲ, ವೇತನ ಹೆಚ್ಚಳಕ್ಕೆ ಸರ್ಕಾರ ಬದ್ಧ: ಶಿವರಾಮ ಹೆಬ್ಬಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಡಗೋಡ (ಉತ್ತರ ಕನ್ನಡ): ‘ಸಾರಿಗೆ ಸಿಬ್ಬಂದಿಯನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವುದು ಹಾಗೂ 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಹೆಚ್ಚಿಸುವುದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲ’ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದರು.

ತಾಲ್ಲೂಕಿನ ಮೈನಳ್ಳಿ ಗ್ರಾಮದಲ್ಲಿ ಬಾಬು ಜಗಜೀವನ್‌ ರಾಂ ಸಭಾಭವನ ನಿರ್ಮಾಣಕ್ಕೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಆದರೆ ಈಗಾಗಲೆ ಭರವಸೆ ನೀಡಿದಂತೆ ವೇತನ ಹೆಚ್ಚಳಕ್ಕೆ ಸರ್ಕಾರ ಬದ್ಧವಾಗಿದೆ. ಸಾರಿಗೆ ನಿಗಮದ ಬೇಡಿಕೆ ಈಡೇರಿಸಿದರೆ ಇನ್ನುಳಿದ 67 ನಿಗಮಗಳಿಗೂ ಅನ್ವಯಿಸುತ್ತದೆ. ಅನುಭವದ ಕೊರತೆಯಿರುವ ಕೆಲ ರಾಜಕಾರಣಿಗಳು ಈ ಮುಷ್ಕರಕ್ಕೆ ಬೆಂಬಲ ನೀಡುವ ಮಾತುಗಳನ್ನಾಡುತ್ತಿರುವುದು ಸರಿಯಲ್ಲ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು