ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಲಿತ ಮತ್ತು ಹಿಂದುಳಿದ ವರ್ಗಗಳ ಏಳಿಗೆಗಾಗಿ ಸರ್ಕಾರ ಬದ್ಧ: ಸಿಎಂ ಬೊಮ್ಮಾಯಿ

Last Updated 31 ಜನವರಿ 2022, 10:14 IST
ಅಕ್ಷರ ಗಾತ್ರ

ಬೆಂಗಳೂರು: ದಲಿತ ಮತ್ತು ಹಿಂದುಳಿದ ವರ್ಗಗಳ ಏಳಿಗೆಗಾಗಿ ಕೆಲವು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಈ ವರ್ಗದ ಬೇಡಿಕೆಗಳ ಈಡೇರಿಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ತಿಳಿಸಿದರು.

ಮುಖ್ಯಮಂತ್ರಿಯವರ ರೇಸ್‌ವ್ಯೂ ಕಾಟೇಜ್‌ನಲ್ಲಿ ಸೋಮವಾರ ಕಾಗಿನೆಲೆ ಕನಕಗುರುಪೀಠದ ನಿರಂಜನಾನಂದಪುರಿ ಸ್ವಾಮಿಗಳ ನೇತೃತ್ವದಲ್ಲಿ ದಲಿತ ಮತ್ತು ಹಿಂದುಳಿದ ವರ್ಗಕ್ಕೆ ಸೇರಿ 34 ಮಠಾಧೀಶರ ಭೇಟಿಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ದಲಿತ ಮತ್ತು ಹಿಂದುಳಿದ ವರ್ಗಗಳ ಏಳಿಗೆಗಾಗಿ ಬಜೆಟ್‌ನಲ್ಲಿ ಹಲವು ಕಾರ್ಯಕ್ರಮಗಳನ್ನು ಪ್ರಕಟಿಸಬೇಕು. ಶಿಕ್ಷಣ ಮತ್ತು ಉದ್ಯೋಗದಲ್ಲಿ ಸಮುದಾಯದ ಯುವಕ ಯುವತಿಯರಿಗೆ ಪ್ರಾತಿನಿಧ್ಯ ನೀಡಬೇಕು. ರಾಜಕೀಯ ಕ್ಷೇತ್ರದಲ್ಲೂ ಹೆಚ್ಚಿನ ಪ್ರಾತಿನಿಧ್ಯ ಸಿಗಬೇಕು ಎಂದು ಮಠಾಧೀಶರು ಮನವಿ ಮಾಡಿದ್ದಾರೆ. ಈ ಬಗ್ಗೆ ಸಾಕಷ್ಟು ಹೋರಾಟಗಳನ್ನು ಮಾಡಿಕೊಂಡು ಬಂದಿದ್ದರೂ ಈವರೆಗೆ ಹೆಚ್ಚಿನ ಒತ್ತು ನೀಡಿಲ್ಲ. ಆದ್ದರಿಂದ ವಿಶೇಷ ಕಾರ್ಯಕ್ರಮಗಳನ್ನು ರೂಪಿಸುವಂತೆ ಮನವಿ ಮಾಡಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.

ಮಠಗಳು ನಡೆಸುವ ಶಾಲಾ–ಕಾಲೇಜುಗಳು, ವಿದ್ಯಾರ್ಥಿ ನಿಲಯಗಳಿಗೆ ಅನುದಾನ ಕೇಳಿದ್ದಾರೆ. ಈ ಮಠಗಳ ಒಕ್ಕೂಟಕ್ಕೆ ಬೆಂಗಳೂರಿನಲ್ಲಿ ಜಮೀನು ಕೇಳಿದ್ದರು. ಹಿಂದಿನ ಸರ್ಕಾರ ಜಮೀನು ನೀಡಿತ್ತು. ಅದು ಕಾನೂನಿನ ಗೊಂದಲದಲ್ಲಿ ಸಿಕ್ಕಿಕೊಂಡಿದೆ. ಹೈಕೋರ್ಟ್‌ನಲ್ಲಿ ಪ್ರಕರಣ ನಡೆಯುತ್ತಿದೆ. ಇದಕ್ಕೆ ಸಂಬಂಧಿಸಿದ ಕಡತ ತರಿಸಿನೋಡುತ್ತೇನೆ ಎಂದರು.

ಮುಖ್ಯಮಂತ್ರಿಯವರಿಗೆ ಸಲ್ಲಿಸಿರುವ ಮನವಿಯಲ್ಲಿ ಹಿಂದುಳಿದ ಮತ್ತು ದಲಿತವರ್ಗದ ಮಠಗಳಿಗೆ ತಲಾ ₹5 ಕೋಟಿ ಅನುದಾನಕ್ಕೆ ಬೇಡಿಕೆ ಸಲ್ಲಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT