ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಪ್ಪು ಶಿಲೀಂಧ್ರ: ಸರ್ಕಾರ ತಡವಾಗಿಯಾದರೂ ಎಚ್ಚೆತ್ತುಕೊಂಡಿದೆ ಎಂದ ಕುಮಾರಸ್ವಾಮಿ

Last Updated 23 ಮೇ 2021, 12:59 IST
ಅಕ್ಷರ ಗಾತ್ರ

ಬೆಂಗಳೂರು: ದೇಶದಲ್ಲಿ ಕೋವಿಡ್ ಸೋಂಕಿನ ಬೆನ್ನಲ್ಲೇ ವ್ಯಾಪಕವಾಗಿ ಹರಡುತ್ತಿರುವ ಕಪ್ಪು ಶಿಲೀಂಧ್ರ ಸೋಂಕಿನ ಚಿಕಿತ್ಸೆ ಕುರಿತು ಸರ್ಕಾರ ಗಮನ ಹರಿಸಿರುವುದು ಮತ್ತು ಕ್ರಮ ಕೈಗೊಳ್ಳುತ್ತಿರುವುದು ಸ್ವಾಗತಾರ್ಹ ಎಂದು ಜೆಡಿಎಸ್ ನಾಯಕ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪ್ರತಿಯೊಂದಕ್ಕೂ ಕೇಂದ್ರವನ್ನು ದೂರುವುದು ಮತ್ತು ಕಾಯುವುದು ಸರಿಯಲ್ಲ ಎಂದಿದ್ದಾರೆ.

ಕಪ್ಪು ಶಿಲೀಂಧ್ರದ ಚಿಕಿತ್ಸೆಗೆ ಅಗತ್ಯವಿರುವ ಔಷಧ ಪೂರೈಕೆಯಲ್ಲಿನ ಕೇಂದ್ರದ ತಾರತಮ್ಯ, ಔಷಧ ಸಂಗ್ರಹಿಸಲು ತೆಲಂಗಾಣ ಕೈಗೊಂಡ ಕ್ರಮಗಳ ಕುರಿತು 22-05-2021ರಂದು ಟ್ವೀಟ್‌ ಮಾಡಿ ಸರ್ಕಾರವನ್ನು ಎಚ್ಚರಿಸಿದ್ದೆ. ಅದು ವರದಿಯೂ ಆಗಿತ್ತು. ಅದರ ಮರುದಿನವೇ ಔಷಧ ಪೂರೈಕೆಗೆ ಸರ್ಕಾರ ಕಂಪನಿಗಳಿಂದ ದರ ಪಟ್ಟಿ ಆಹ್ವಾನಿಸಿದೆ. ಇದು ಸ್ವಾಗತಾರ್ಹ ಕ್ರಮ.

ಕಪ್ಪು ಶಿಲೀಂಧ್ರ ಚಿಕಿತ್ಸೆಗೆ ಅಗತ್ಯವಿರುವ ಔಷಧ ಸಂಗ್ರಹಿಸಲು ಸರ್ಕಾರ ತಡವಾಗಿಯಾದರೂ ಎಚ್ಚೆತ್ತುಕೊಂಡಿದೆ. ಪ್ರತಿಯೊಂದಕ್ಕೂ ಕೇಂದ್ರದತ್ತ ನೋಡದೇ ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳುವಂತೆ ನೀಡಿದ್ದ ಸಲಹೆಯನ್ನು ಸರ್ಕಾರ ಪರಿಗಣಿಸಿದೆ. ಸೂಕ್ತ ಸಮಯದಲ್ಲಿ ನೀಡಲಾಗುವ ಸೂಕ್ತ ಸಲಹೆಗಳನ್ನು ಮನ್ನಿಸುವುದು ರಾಜ್ಯದ ಹಿತದೃಷ್ಟಿಯಿಂದಲೂ ಒಳ್ಳೆಯದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT