ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಸಾವಿನ ಸಂಖ್ಯೆ ಮುಚ್ಚಿಡುತ್ತಿರುವ ಸರ್ಕಾರ: ಎಚ್‌.ಕೆ.ಪಾಟೀಲ

Last Updated 31 ಆಗಸ್ಟ್ 2020, 11:20 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಾವಿನ ಸಂಖ್ಯೆಯನ್ನು ಉದ್ದೇಶಪೂರ್ವಕವಾಗಿ ಮುಚ್ಚಿಡಲಾಗಿದೆ. ಈ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಎಚ್‌.ಕೆ.ಪಾಟೀಲ ಆರೋಪಿಸಿದ್ದಾರೆ.

ಬೆಂಗಳೂರು ನಗರವೊಂದರಲ್ಲೇ ಜನವರಿಯಿಂದ ಜುಲೈ ಅವಧಿಯಲ್ಲಿ 49,135 ಸಾವಿನ ಪ್ರಕರಗಳು ವರದಿಯಾಗಿವೆ ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವಿದ್ಯುತ್‌ ಚಿತಾಗಾರ, ಸ್ಮಶಾನಗಳಲ್ಲಿ ಪಾರ್ಥಿವ ಶರೀರಗಳ ಅಂತ್ಯಕ್ರಿಯೆಗಳ ಅಂಕಿ–ಸಂಖ್ಯೆ ಗಾಬರಿ ಹುಟ್ಟಿಸುತ್ತಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜನವರಿಯಿಂದ ಜುಲೈ ಅವಧಿಯಲ್ಲಿ ಸಾವಿನ ಸಂಖ್ಯೆ 37,001 ಇತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ 12,136 ಜನ ಹೆಚ್ಚುವರಿಯಾಗಿ ಸಾವನ್ನಪ್ಪಿದ್ದಾರೆ. ಸಾವಿನ ಪ್ರಮಾಣ ಶೇ 32 ರಷ್ಟು ಏರಿಕೆಯಾಗಿರುವುದು ಕಳವಳಕಾರಿ ಸಂಗತಿ ಎಂದು ಹೇಳಿದರು.

ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 1866 ಎಂದು ಸರ್ಕಾರ ಹೇಳುತ್ತಿದೆ. ಆದರೆ 10 ಸಾವಿರ ವ್ಯತ್ಯಾಸ ಕಂಡುಬರುತ್ತಿದೆ. ಕೊರೊನಾ ಅಲ್ಲದೆ, 10 ಸಾವಿರ ಸಾವು ಸಂಭವಿಸಿದೆ. ಈ ಬಗ್ಗೆ ಸಮಗ್ರ ಮಾಹಿತಿಯನ್ನು ಸರ್ಕಾರ ನೀಡಬೇಕು ಎಂದು ಪಾಟೀಲ ಒತ್ತಾಯಿಸಿದರು.

ರಾಜ್ಯ ಸರ್ಕಾರ ಜನವರಿಯಿಂದ ಇಲ್ಲಿಯವರೆಗೆ ಸಾವಿನ ಸಂಖ್ಯೆಗಳ ಲೆಕ್ಕಪರಿಶೋಧನೆ ಮತ್ತು ಸಾವಿನ ಕಾರಣಗಳ ವೈದ್ಯಕೀಯ ಪರಿಶೋಧನೆ ಮಾಡಿಯೇ ಇಲ್ಲ. ಇದರಿಂದಾಗಿ ಸಾವು ಯಾವು ಕಾರಣಕ್ಕೆ ಸಂಭವಿಸಿದೆ ಎಂಬುದನ್ನು ಪತ್ತೆ ಮಾಡಲು ಆಗಿಲ್ಲ. ಇದರ ಜತೆಗೆ ಸಾವಿನ ಕಾರಣಗಳ ವೈದ್ಯಕೀಯ ಪ್ರಮಾಣೀಕರಣ ಆಗಬೇಕಿತ್ತು ಎಂದೂ ಅವರು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ದಿನೇ ದಿನೇ ಹೆಚ್ಚಾಗುತ್ತಿದೆ. ರಾಷ್ಟ್ರೀಯ ಸರಾಸರಿಗಿಂತಲೂ ಎರಡು ಪಟ್ಟು ಹೆಚ್ಚಾಗಿದೆ. ವಿದೇಶಗಳಿಂದ ಬಂದವರನ್ನು ಕ್ವಾರಂಟೈನ್ ಮಾಡದೇ ಸರ್ಕಾರ ಉದಾಸೀನ ಮಾಡುತ್ತಿದೆ. ರಾಜ್ಯದಲ್ಲಿ ಆಕ್ಸಿಜನ್‌ ಸಮಸ್ಯೆ ಇದೆ ಎಂದು ಪಾಟೀಲ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT