ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲೆ-ಕಾಲೇಜು ಆರಂಭಿಸುವ ಬಗ್ಗೆ ಶೀಘ್ರವೇ ಸ್ಪಷ್ಟ ಮಾಹಿತಿ: ಡಿಸಿಎಂ ಅಶ್ವತ್ಥನಾರಾಯಣ

Last Updated 1 ಅಕ್ಟೋಬರ್ 2020, 11:18 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ಶಾಲಾ- ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಶೀಘ್ರದಲ್ಲೇ ಸ್ಪಷ್ಟ ಮಾಹಿತಿ ನೀಡಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಹೇಳಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಕಾಲೇಜುಗಳ ಆರಂಭಕ್ಕೆ ಸಂಬಂಧಿಸಿ ಯುಜಿಸಿ ಈಗಾಗಲೇ ಮಾರ್ಗಸೂಚಿ ನೀಡಿದೆ. ಅದರಂತೆ, ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.‌ ಸುರೇಶ್‌ಕುಮಾರ್‌ ಜತೆಗೂ ಚರ್ಚಿಸಿದ ನಂತರ ಸ್ಪಷ್ಟ ಮಾಹಿತಿ ನೀಡಲಾಗುವುದು’ ಎಂದರು.

ಪ್ರಶ್ನೆಯೊಂದಕ್ಕೆ ಅವರು, ‘ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಯಾವುದೇ ಸಮಸ್ಯೆ ಆಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಶೈಕ್ಷಣಿಕ ಚಟುವಟಿಕೆ ಆರಂಭಿಸಲಾಗಿದೆ. ಅದರ ಮುಂದುವರೆದ ಭಾಗವಾಗಿ ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ಎಂದಿನಿಂದ ಹಾಜರಾಗಬೇಕು ಎಂಬ ಬಗ್ಗೆ ಸಂಬಂಧಿಸಿದವರ ಜೊತೆ ಚರ್ಚಿಸಲಾಗುವುದು’ ಎಂದರು.

‘ಕೋವಿಡ್‌ ಮಾರ್ಗಸೂಚಿಯ ಪ್ರಕಾರ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ಅವೆಲ್ಲವುಗಳ ಸಾಧಕ- ಬಾಧಕಗಳನ್ನು ನೋಡಿಕೊಂಡೇ ತರಗತಿಗಳನ್ನು ಆರಂಭಿಸಲಾಗುವುದು’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT