ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಥಿಕ ಇತಿಮಿತಿಯಲ್ಲಿ ಸಾರಿಗೆ ಸಂಸ್ಥೆ ನೌಕರರ ಬೇಡಿಕೆ ಈಡೇರಿಕೆ ಯತ್ನ: ಸವದಿ

Last Updated 6 ಏಪ್ರಿಲ್ 2021, 6:11 IST
ಅಕ್ಷರ ಗಾತ್ರ

ಕಲಬುರ್ಗಿ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ನೌಕರರ ಒಂಭತ್ತು ಬೇಡಿಕೆಗಳನ್ನು ಈಗಾಗಲೇ ಈಡೇರಿಸಿದ್ದೇವೆ. ಇನ್ನೂ ಒಂದು ಬಾಕಿ ಇರುವ ವೇತನ ಹೆಚ್ಚಳ ಬೇಡಿಕೆಯನ್ನೂ ಮೇ 4ರ ನಂತರ ಆರ್ಥಿಕ ‌ಇತಿಮಿತಿಯಲ್ಲಿ ಈಡೇರಿಸುವ ಬಗ್ಗೆ ನೌಕರರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ಬಸವಕಲ್ಯಾಣ ವಿಧಾನಸಭಾ ಉಪ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ಮಂಗಳವಾರ ಇಲ್ಲಿನ ವಿಮಾನ ನಿಲ್ದಾಣಕ್ಕೆ ‌ಬಂದಿಳಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಈಗ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಬೇಡಿಕೆ ಈಡೇರಿಸಲಿಕ್ಕಾಗುತ್ತಿಲ್ಲ. ಹೀಗಾಗಿ ಚುನಾವಣಾ ಫಲಿತಾಂಶ ನಂತರ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಲಾಗಿದೆ ಎಂದು ವಿವರಿಸಿದರು.

ಕೊರೊನಾ ಸಂದರ್ಭದಲ್ಲಿ‌ ಬಸ್ ಸಂಚಾರ ಸ್ಥಗಿತಗೊಳಿಸಿದರೆ ಬಡವರಿಗೆ, ಮಧ್ಯಮ ವರ್ಗದವರಿಗೆ, ಶಾಲಾ ಮಕ್ಕಳಿಗೆ ಸಾಕಷ್ಟು ತೊಂದರೆ ಆಗುತ್ತದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಹೋರಾಟದ ನೇತೃತ್ವ ವಹಿಸಿರುವ ಕೋಡಿಹಳ್ಳಿ ಚಂದ್ರಶೇಖರ್ ಮೇಧಾವಿ, ಬಹಳ ಬುದ್ದಿವಂತರು. ಅವರ ಬುದ್ದಿ ನಮ್ಮ ಸರ್ಕಾರಕ್ಕೆ ಇಲ್ಲಾ ಅಂತಾ ಅಂದುಕೊಳ್ಳುತ್ತೇನೆ. ಅನಾವಶ್ಯಕವಾಗಿ ಸರ್ಕಾರ ಮತ್ತು ನೌಕರರ ಮಧ್ಯೆ ಗೊಂದಲ ಸೃಷ್ಟಿ ಮಾಡೋದಕ್ಕೆ ಮುಂದಾಗಿದ್ದಾರೆ.

ಒಂದು ವೇಳೆ ಬಸ್ ಸಂಚಾರ ಬಂದ್ ಮಾಡಿದರೆ ಅನಿವಾರ್ಯವಾಗಿ ಖಾಸಗಿ ವಾಹನಗಳನ್ನ ತಂದು ಓಡಿಸುತ್ತೇವೆ. ಈ‌‌ ಸಂಬಂಧ ‌ಇಂದು (ಮಂಗಳವಾರ) ಮುಖ್ಯಮಂತ್ರಿ ‌ಬಿ.ಎಸ್.ಯಡಿಯೂರಪ್ಪ ಅವರು ಪ್ರತಿಭಟನಾ ನಿರತರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಸವದಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT