ಶುಕ್ರವಾರ, ಏಪ್ರಿಲ್ 16, 2021
31 °C

ಗ್ರಾ.ಪಂ. ಸದಸ್ಯರ ಹರಾಜು ಪ್ರಕರಣದ ಆರೋಪಿಗಳು ಅವಿರೋಧ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುರುಗೋಡು (ಬಳ್ಳಾರಿ): ತಾಲ್ಲೂಕಿನ ಸಿಂಧಿಗೇರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೈಲೂರು ಗ್ರಾಮ ಪಂಚಾಯ್ತಿ ಸದಸ್ಯರ ಹರಾಜು ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ 7 ಜನರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ದೇವಸ್ಥಾನದ ಅಭಿವೃದ್ಧಿಗೆ ಅವಿರೋಧ ಆಯ್ಕೆಮಾಡುವ ಪ್ರಕ್ರಿಯೆಯಲ್ಲಿ ₹51.20 ಲಕ್ಷ ಸಂಗ್ರಹವಾದ ವಿಡಿಯೊ ಕಳೆದ ವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಸುದ್ದಿಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 18 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಪ್ರಕರಣದಲ್ಲಿರುವವರೇ ಅವಿರೋಧ ಆಯ್ಕೆಯಾಗಿರುವುದು ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ.

ಈ ಕುರಿತು ‘ಪ್ರಜಾವಾಣಿ’ಯೊಂದಿಗೆ ಪ್ರತಿಕ್ರಿಯಿಸಿದ ಚುನಾವಣಾಧಿಕಾರಿ ಗುರುಬಸವರಾಜ, ‘ಸದಸ್ಯರ ಅವಿರೋಧ ಆಯ್ಕೆಯ ಹರಾಜು ಪ್ರಕರಣದಲ್ಲಿರುವ ಏಳು ಜನರು ಬೈಲೂರು ಗ್ರಾಮದಿಂದ ಅವಿರೋಧ ಆಯ್ಕೆಯಾಗಿರುವ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ತಾತ್ಕಾಲಿಕವಾಗಿ ಅವಿರೋಧ ಆಯ್ಕೆ ಘೋಷಣೆ ಮಾಡದಂತೆ ತಡೆಹಿಡಿಯಲು ಸೂಚಿಸಿದ್ದಾರೆ. ರಾಜ್ಯ ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಕ್ರಮ ಜರುಗಿಸಲಾಗುವುದು’ ಎಂದು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು