ಶನಿವಾರ, ಮಾರ್ಚ್ 25, 2023
28 °C

ಗ್ರೇಡ್‌– 2 ತಹಶೀಲ್ದಾರ್‌ ಹುದ್ದೆ: 47 ಮಂದಿಗೆ ನೇಮಕಾತಿ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 2017ರ ಗೆಜೆಟೆಡ್‌ ಪ್ರೊಬೇಷನರಿ ಪರೀಕ್ಷೆಯಲ್ಲಿ ಗ್ರೇಡ್‌–2 ತಹಶೀಲ್ದಾರ್‌ ಹುದ್ದೆಗೆ ಆಯ್ಕೆಯಾಗಿದ್ದ 50 ಮಂದಿಯ ಪೈಕಿ 47 ಮಂದಿಗೆ ಕಂದಾಯ ಇಲಾಖೆ ಶುಕ್ರವಾರ ನೇಮಕಾತಿ ಆದೇಶ ನೀಡಿದೆ.

106 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ 2017ರಲ್ಲಿ ಪ್ರಕ್ರಿಯೆ ಆರಂಭಿಸಲಾಗಿತ್ತು. 2021ರ ಫೆಬ್ರುವರಿಯಲ್ಲಿ ಮುಖ್ಯ ಪರೀಕ್ಷೆ ನಡೆದಿತ್ತು. 2022ರ ಸೆಪ್ಟೆಂಬರ್‌ 9ರಂದು ಆಯ್ಕೆಪಟ್ಟಿ ಪ್ರಕಟಿಸಲಾಗಿತ್ತು.

ಕಂದಾಯ ಇಲಾಖೆಯ ಮೂಲ ವೃಂದದ 44 ಹಾಗೂ ಹೈದರಾಬಾದ್‌ ಕರ್ನಾಟಕ ವೃಂದದ ಆರು ತಹಶೀಲ್ದಾರ್‌ ಗ್ರೇಡ್‌–2 ಹುದ್ದೆಗಳಿಗೆ ಒಟ್ಟು 50 ಅಭ್ಯರ್ಥಿಗಳ ಅಯ್ಕೆಪಟ್ಟಿ ಪ್ರಕಟಿಸಲಾಗಿತ್ತು. ಈಗ ಕಂದಾಯ ಇಲಾಖೆಯ ಮೂಲ ವೃಂದಕ್ಕೆ ಆಯ್ಕೆಯಾದ 42 ಮತ್ತು ಹೈದರಾಬಾದ್‌ ಕರ್ನಾಟಕ ವೃಂದಕ್ಕೆ ಆಯ್ಕೆಯಾದ ಐದು ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು