ಗ್ರಾ.ಪಂ: ಮೊದಲ ಹಂತದ ನಾಮಪತ್ರ ಸಲ್ಲಿಕೆ ಮುಕ್ತಾಯ
ಬೆಂಗಳೂರು: ಇದೇ 22 ರಂದು ನಡೆಯುವ ಗ್ರಾಮ ಪಂಚಾಯತ್ ಮೊದಲ ಹಂತದ ಚುನಾವಣೆಯ ನಾಮಪತ್ರ ಸಲ್ಲಿಕೆ ಅವಧಿ ಶುಕ್ರವಾರ ಕೊನೆಗೊಂಡಿದೆ.
ಎರಡನೇ ಹಂತದ ಚುನಾವಣೆಗೆ ಶುಕ್ರವಾರೇ ಅಧಿಸೂಚನೆ ಹೊರಡಿಸಲಾಗಿದ್ದು, ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಮೊದಲ ಹಂತದ ಚುನಾವಣೆಯ ನಾಮಪತ್ರಗಳ ಪರಿಶೀಲನೆ ಶನಿವಾರ ನಡೆಯಲಿದೆ. ನಾಮಪತ್ರ ಹಿಂದಕ್ಕೆ ಪಡೆಯಲು ಡಿ.14 ಕೊನೆಯ ದಿನವಾಗಿದೆ.
ಎರಡನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಡಿ.16 ಕೊನೆಯ ದಿನವಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.