ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗ್ರಾಮ ಒನ್‌’: ಕೋಟಿ ದಾಟಿದ ಫಲಾನುಭವಿಗಳ ಸಂಖ್ಯೆ

Last Updated 22 ಅಕ್ಟೋಬರ್ 2022, 18:37 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರ ಗ್ರಾಮೀಣ ಭಾಗಗಳಲ್ಲಿ ನಾಗರಿಕರ ಮನೆ ಬಾಗಿಲಿಗೆ ವಿವಿಧ ಸೇವೆಗಳನ್ನು ಒದಗಿಸಲು ಆರಂಭಿಸಿರುವ ‘ಗ್ರಾಮ ಒನ್‌’ ಯೋಜನೆಯ ಫಲಾನುಭವಿಗಳ ಸಂಖ್ಯೆ ಕೇವಲ ಒಂಬತ್ತು ತಿಂಗಳಲ್ಲಿ ಒಂದು ಕೋಟಿ ದಾಟಿದೆ. ಯೋಜನೆಯು
ಜ. 17ರಂದು ಆರಂಭಗೊಂಡಿತ್ತು.

ಈ ಬಗ್ಗೆ ಮಾಹಿತಿ ನೀಡಿದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ) ಕಾರ್ಯದರ್ಶಿ ವಿ. ಪೊನ್ನುರಾಜ್, ‘ಗ್ರಾಮ ಒನ್ ಕೇಂದ್ರಗಳ ಮೂಲಕ ನಾಗರಿಕರ ಮನೆ ಬಾಗಿಲಿಗೆ ವಿವಿಧ ಸೇವೆಗಳನ್ನು ತಲುಪಿಸುವುದು ಸರ್ಕಾರದ ಉದ್ದೇಶ. ಸೇವಾಸಿಂಧು ಯೋಜನೆಯಡಿ ರೂಪಿಸಲಾಗಿರುವ 800 ಸೇವೆಗಳ ಜೊತೆ ಆಧಾರ್, ಪಾನ್ ಕಾರ್ಡ್, ಬ್ಯಾಂಕಿಂಗ್, ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಇ- ಸ್ಟ್ಯಾಂಪ್ ಮತ್ತಿತರ ಸೇವೆಗಳನ್ನೂ ನೀಡಲಾಗುತ್ತಿದೆ’ ಎಂದಿದ್ದಾರೆ.

‘ಗ್ರಾಮೀಣರಿಗೆ ಸರ್ಕಾರದ ಸೇವೆಗಳು ಸುಲಭವಾಗಿ ಸಿಗುವಂತೆ ಮಾಡುವುದು ಈ ಯೋಜನೆಯ ಮೂಲ ಉದ್ದೇಶ. ನಾಗರಿಕ ಕೇಂದ್ರಿತ ಎಲ್ಲ ಸೇವೆಗಳನ್ನು ನೀಡುವ ಚಟುವಟಿಕೆಗೆ ಏಕ- ಗವಾಕ್ಷಿ ಕೇಂದ್ರವಾಗಿ ಈ ಯೋಜನೆಯನ್ನು ಸೃಜಿಸಲಾಗಿದ್ದು, ಎಲ್ಲ 31 ಜಿಲ್ಲೆಗಳಲ್ಲಿಯೂ ಅಭೂತಪೂರ್ವ ಯಶಸ್ಸು ಕಂಡಿದೆ’ ಎಂದು ಯೋಜನೆಯ ಯೋಜನಾ ನಿರ್ದೇಶಕ ಬಿ.ಎನ್‌. ವರಪ್ರಸಾದ್ ರೆಡ್ಡಿ ತಿಳಿಸಿದ್ದಾರೆ.

‘ಸದ್ಯ 7,112 ಗ್ರಾಮ ಒನ್ ಕೇಂದ್ರಗಳು ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8ರವರೆಗೆ ಕಾರ್ಯನಿರ್ವಹಿ
ಸುತ್ತಿವೆ. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಕನಿಷ್ಠ ಒಂದು ಕೇಂದ್ರ ಇರಬೇಕೆಂಬ ಕಾರಣಕ್ಕೆ ಇನ್ನೂ 1,600 ಕೇಂದ್ರಗಳನ್ನು ತೆರೆಯಲು ಸರ್ಕಾರ ಉದ್ದೇಶಿಸಿದೆ. ಮಧ್ಯವರ್ತಿಗಳ ಹಾವಳಿಯಿಂದ ನಾಗರಿಕರನ್ನು ಮುಕ್ತಗೊಳಿಸುವ ಜೊತೆಗೆ, ಗುಣಮಟ್ಟದ ಸೇವೆಯನ್ನು ನಿಗದಿತ ಸಮಯದಲ್ಲಿ ಇಲ್ಲಿ ನೀಡಲಾಗುತ್ತಿದೆ’ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT