ಗುರುವಾರ , ಆಗಸ್ಟ್ 11, 2022
24 °C

ನೀತಿ ಸಂಹಿತೆ ಉಲ್ಲಂಘನೆ: ಆಯೋಗಕ್ಕೆ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು ಪ್ರಭಾವ ಬೀರುತ್ತಿವೆ ಮತ್ತು ನೀತಿ ಸಂಹಿತೆ ಉಲ್ಲಂಘಿಸುತ್ತಿವೆ’ ಎಂದು ಆರೋಪಿಸಿ ರಾಜ್ಯ ಚುನಾವಣಾ ಆಯೋಗಕ್ಕೆ ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನ ಸಂಘಟನೆ ದೂರು ಸಲ್ಲಿಸಿದೆ.

‘ಗ್ರಾಮ ಪಂಚಾಯತಿ ಚುನಾವಣೆಗಳು ಯಾವುದೇ ಪಕ್ಷದ ಆಧಾರದಲ್ಲಿ ನಡೆಯುತ್ತಿಲ್ಲ. ಆದರೆ, ಕೆಲ ಪಕ್ಷಗಳು ಈ ಚುನಾವಣೆಯಲ್ಲಿ ನೇರವಾಗಿ ಪಾಲ್ಗೊಂಡು ಪಕ್ಷ ಸಂಘಟನೆ ಮತ್ತು ಗ್ರಾಮೀಣ ಪ್ರದೇಶಗಳ ಸ್ಥಳೀಯ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಯತ್ನಿಸುತ್ತಿವೆ. ಸಾರ್ವಜನಿಕ ಸಮಾವೇಶಗಳು, ಅಭ್ಯರ್ಥಿಗಳಿಗೆ ಬೆಂಬಲ ನೀಡುತ್ತಿವೆ’ ಎಂದು ಆರೋ‍ಪಿಸಿದೆ.

‘ಚುನಾವಣಾ ನೀತಿ ಸಂಹಿತೆ ಜಾರಿಯಾದ ನಂತರವೂ ಬಿಜೆಪಿಯಿಂದ ಗ್ರಾಮ ಸ್ವರಾಜ್ ಸಮಾವೇಶ, ಕಾಂಗ್ರೆಸ್‌ನಿಂದ ಪ್ರಜಾ ಪ್ರತಿನಿಧಿ ಸಮಿತಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಉಪಮುಖ್ಯಮಂತ್ರಿ ಸಿ.ಎನ್. ಅಶ್ವತ್ಥನಾರಾಯಣ ಅವರು ಪ್ರತಿ ಪಂಚಾಯಿತಿಗೆ ವರ್ಷಕ್ಕೆ ₹1.5 ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು, ನರೇಗಾ ಯೋಜನೆ ಅನುಷ್ಠಾನದ ಹೊಣೆ ಜಿಲ್ಲಾ ಪಂಚಾಯಿತಿ ಬದಲು ಗ್ರಾಮ ಪಂಚಾಯಿತಿಗೆ ವಹಿಸಲಾಗುವುದು ಎಂದು ಹೇಳಿಕೆ ನೀಡಿದ್ದಾರೆ. ನೀತಿ ಸಂಹಿತೆ ಜಾರಿಯಾದ ಬಳಿಕ ಈ ರೀತಿ ಘೋಷಣೆ ಮಾಡಿರುವುದು ಚುನಾವಣೆ ಮೇಲೆ ಪ್ರಭಾವ ಬೀರಲಿದೆ’ ಎಂದು ಹೇಳಿದೆ.

‘ಇವುಗಳ ಬಗ್ಗೆ ಆಯೋಗ ಗಮನ ಹರಿಸಿ ನೈಜ ಗ್ರಾಮ ಸ್ವರಾಜ್ ಸ್ಥಾಪನೆಯ ಸಂವಿಧಾನದ ಆಶಯ ಕಾಪಾಡಬೇಕು’ ಎಂದು ಆಂದೋಲನದ ಸಂಚಾಲಕಿ ನಂದನ ರೆಡ್ಡಿ ಆಯೋಗಕ್ಕೆ ಮನವಿ ಮಾಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು