ಬೆಂಗಳೂರು: ಇದೇ ಜುಲೈ ಒಳಗೆ ಅವಧಿ ಮುಕ್ತಾಯವಾಗುವ ನಾಲ್ಕು ಗ್ರಾಮ ಪಂಚಾಯಿತಿಗಳ 105 ಸ್ಥಾನಗಳು ಮತ್ತು ರಾಜ್ಯದ ಹಲವು ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಗೆ ತೆರವಾಗಿರುವ 209 ಸದಸ್ಯ ಸ್ಥಾನಗಳಿಗೆ ಮೇ 20 ರಂದು ಚುನಾವಣೆ ನಡೆಯಲಿದೆ.
ಧಾರವಾಡ ಜಿಲ್ಲೆಯ ಚಾಕಲಬ್ಬಿ, ಬೆಂಗಳೂರು ನಗರ ಜಿಲ್ಲೆಯ ಕಗ್ಗಲೀಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತ್ಯಾಮಗೊಂಡ್ಲು, ಬಾಗಲಕೋಟೆ ಜಿಲ್ಲೆ ಸಾವಳಗಿ ಗ್ರಾಮ ಪಂಚಾಯಿತಿಗಳ 105 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜೊತೆಗೆ, ತುಮಕೂರು ಜಿಲ್ಲೆ ಶಿರಾ ನಗರಸಭೆಯ 21 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ದಾವಣಗೆರೆ ಮಹಾನಗರಪಾಲಿಕೆಯ 2, ಚನ್ನಗಿರಿ ಪುರಸಭೆಯ 1, ಆನೆಕಲ್ ಪುರಸಭೆಯ 3, ಹೊಳೆನರಸೀಪುರ, ಜೇವರ್ಗಿ ಮತ್ತು ಸಂಕೇಶ್ವರ ಪುರಸಭೆಯ ತಲಾ 1 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಮತ್ತು ಖಾಸಗಿ ನೌಕರರಿಗೆ ರಜೆಯ ವ್ಯವಸ್ಥೆ ಮಾಡಲಾಗಿದೆ.