ಚಳ್ಳಕೆರೆ ತಾಲೂಕಲ್ಲೂ ಗ್ರಾಮ ಪಂಚಾಯಿತಿ ಸ್ಥಾನ ಹರಾಜು: ₹7 ಲಕ್ಷಕ್ಕೆ ಸೀಟು ಮಾರಾಟ

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಕಾಲುವೆಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಾದಲಗಟ್ಟೆ ಗ್ರಾಮದ ನಾಲ್ಕು ಸದಸ್ಯ ಸ್ಥಾನಕ್ಕೆ ಹರಾಜು ಪ್ರಕ್ರಿಯೆ ನಡೆಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗ್ರಾಮದ ಮುಖಂಡರು ಸಭೆ ನಡೆಸಿ ನಾಲ್ಕು ಸ್ಥಾನಗಳನ್ನು ಹರಾಜು ಮಾಡಲಾಗಿದೆ. ಮೂರು ಸ್ಥಾನಗಳು ತಲಾ ₹3.5 ಲಕ್ಷಕ್ಕೆ ಹಾಗೂ ತೀವ್ರ ಸ್ಪರ್ಧೆ ಇದ್ದ ಒಂದು ಸ್ಥಾನ ₹7 ಲಕ್ಷಕ್ಕೆ ಹರಾಜಾಗಿದೆ.
ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನದ ಆಕಾಂಕ್ಷಿಗಳಾದ ಭೀಮಣ್ಣ, ಬೊಮ್ಮಜ್ಜ, ಲಕ್ಷ್ಮೀದೇವಿ, ಶಾಂತಮ್ಮ ಅವರ ಅವಿರೋಧ ಆಯ್ಕೆಗೆ ಗ್ರಾಮಸ್ಥರು ಒಮ್ಮತದ ನಿರ್ಧಾರ ಕೈಗೊಂಡಿದ್ದಾರೆ. ಗ್ರಾಮದ ದೇಗುಲದ ಮುಂಭಾಗದಲ್ಲಿ ಸಭೆ ನಡೆದಿದೆ. ಈ ಬಗ್ಗೆ ಇನ್ನೂ ಯಾವುದೇ ಪ್ರಕರಣ ದಾಖಲಾಗಿಲ್ಲ.
‘ಹರಾಜು ಪ್ರಕ್ರಿಯೆ ಇನ್ನೂ ಖಚಿತವಾಗಿಲ್ಲ. ಸೆಕ್ಟರ್ ಅಧಿಕಾರಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡುವಂತೆ ಸೂಚಿಸಿದ್ದೇನೆ. ಅವರು ನೀಡುವ ವರದಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗೆ ರವಾನೆ ಮಾಡಲಾಗುವುದು’ ಎಂದು ಚಳ್ಳಕೆರೆ ತಹಶೀಲ್ದಾರ್ ಮಲ್ಲಿಕಾರ್ಜುನಪ್ಪ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.