ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾ.ಪಂ ಚುನಾಯಿತ ಪ್ರತಿನಿಧಿಗಳ ಗೌರವಧನ ಹೆಚ್ಚಳ

Last Updated 18 ಡಿಸೆಂಬರ್ 2022, 21:45 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಎಲ್ಲ ಗ್ರಾಮ ಪಂಚಾಯತಿ ಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ತಿಂಗಳ ಗೌರವಧನವನ್ನು ಇಮ್ಮಡಿಗೊಳಿಸಿ ರಾಜ್ಯ ಸರ್ಕಾರ ಭಾನುವಾರ ಆದೇಶ ಹೊರಡಿಸಿದೆ.

ಸರ್ಕಾರ 2017ರ ಮೇ 5 ರಂದು ಹೊರಡಿಸಿದ್ದ ಆದೇಶದ ಅನ್ವಯ ಸದ್ಯ ಅಧ್ಯಕ್ಷರಿಗೆ ₹ 3 ಸಾವಿರ, ಉಪಾಧ್ಯಕ್ಷರಿಗೆ ₹ 2 ಸಾವಿರ, ಸದಸ್ಯರಿಗೆ ₹ 1 ಸಾವಿರ ಮಾಸಿಕ ಗೌರವಧನ ನೀಡಲಾಗುತ್ತಿದೆ. ಈ ಮೊತ್ತವನ್ನು ಕ್ರಮವಾಗಿ ₹ 6 ಸಾವಿರ, ₹ 4 ಸಾವಿರ, ₹ 2 ಸಾವಿರಕ್ಕೆ ಹೆಚ್ಚಿಸಲಾಗಿದೆ.

ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಮಾಸಿಕ ಗೌರವ ಧನ ಹೆಚ್ಚಿಸುವಂತೆ ಆಗ್ರಹಿಸಿ ವಿಧಾನ ಪರಿಷತ್‌ ಕಾಂಗ್ರೆಸ್‌ ಸದಸ್ಯ ಸುನೀಲಗೌಡ ಪಾಟೀಲ ಸದನದ ಒಳಗೆ ಮತ್ತು ಹೊರಗೆ ನಿರಂತರ ಹೋರಾಟ ನಡೆಸುತ್ತಿದ್ದಾರೆ.

ಕಳೆದ ಅಧಿವೇಶನದಲ್ಲಿ ವಿಧಾನ ಪರಿಷತ್ತಿನಲ್ಲಿ ಸುನೀಲಗೌಡ ಪಾಟೀಲ ಕೇಳಿದ್ದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಮಾಸಿಕ ಗೌರವಧನ ಹೆಚ್ಚಳ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಈ ಗೌರವಧನ ಪರಿಷ್ಕರಣೆ ಮಾಡಲು ನಿರ್ದಿಷ್ಟ ಕಾಲಮಿತಿ ನಿಗದಿಪಡಿಸಿಲ್ಲ’ ಎಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT