ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಮ್ಮ ಲಿಂಗೈಕ್ಯ ದಿನವೇ ಅನುದಾನ ವಾಪಸ್‌: ಎಚ್ಚರಿಕೆ

300 ಕಿ.ಮೀ. ಕ್ರಮಿಸಿದ ಕೂಡಲಸಂಗಮ ಶ್ರೀ ಪಾದಯಾತ್ರೆ
Last Updated 27 ಜನವರಿ 2021, 18:26 IST
ಅಕ್ಷರ ಗಾತ್ರ

ಹರಪನಹಳ್ಳಿ: ಪಂಚಮಸಾಲಿ ಜನಾಂಗಕ್ಕೆ 2 ‘ಎ’ ಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಹಮ್ಮಿಕೊಂಡಿರುವ ಪಂಚಲಕ್ಷ ಹೆಜ್ಜೆಗಳ ಪಾದಯಾತ್ರೆ 300 ಕಿ.ಮೀ. ಕ್ರಮಿಸಿದ್ದು, ತಾಲ್ಲೂಕಿನ ತೆಲಿಗಿ ಗ್ರಾಮದಲ್ಲಿ ವಾಸ್ತವ್ಯ ಹೂಡಿದೆ.

ಕೂಡಲ ಸಂಗಮ ಪಂಚಮಸಾಲಿ ಮಠದ ಪೀಠಾಧ‍್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ‘ಚಿತ್ರದುರ್ಗ ತಲುವುದರ ಒಳಗೆ ಮೀಸಲಾತಿ ಘೋಷಣೆ ಮಾಡದಿದ್ದರೆ, ಫೆ. 2ರಂದು ಕಿತ್ತೂರು ರಾಣಿ ಚನ್ನಮ್ಮ ಅವರ ಲಿಂಗೈಕ್ಯ ದಿನವೇ ಅನುದಾನದ ಆದೇಶ ಪತ್ರವನ್ನು ಯಡಿಯೂರಪ್ಪ ಅವರ ಮನೆಗೆ ಅಂಟಿಸಿ ಸರ್ಕಾರಕ್ಕೆ ವಾಪಸ್‌ ಮಾಡುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಹೋರಾಟ ಸಮಿತಿ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ
ಕಾಶೆಪ್ಪನವರ ಮಾತನಾಡಿ, ‘ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟದಲ್ಲಿ ಯಾವುದೇ ಭಿನ್ನಾಭಿಪ್ರಾಯ ಮಾಡದೇ ಸಮಾಜದ ಮುಖಂಡರು ಒಂದೇ ತಾಯಿಯ ಮಕ್ಕಳಂತೆ ಹೋರಾಟ ಮಾಡೋಣ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT