ಕೆಕೆಆರ್‌ಡಿಬಿಗೆ ಅನುದಾನ: ಮುಖ್ಯಮಂತ್ರಿ ಅಸಹಾಯಕತೆ

ಕಲಬುರ್ಗಿ: ಕಲ್ಯಾಣ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಬದ್ಧ ಎಂದು ಹೇಳಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೊರೊನಾ ಸಂಕಷ್ಟದ ಕಾರಣದಿಂದಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಅಗತ್ಯ ಅನುದಾನ ನೀಡಲು ಸದ್ಯಕ್ಕೆ ಸಾಧ್ಯವಾಗುತ್ತಿಲ್ಲ ಎಂಬ ಅಸಹಾಯಕತೆಯನ್ನೂ ವ್ಯಕ್ತಪಡಿಸಿದರು.
ನಗರದಲ್ಲಿ ಗುರುವಾರ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.
371 (ಜೆ) ಕೋಶ ಬೆಂಗಳೂರಿನಿಂದ ಕಲಬುರ್ಗಿಗೆ ಸ್ಥಳಾಂತರಿಸುವ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಯ ವಿಳಂಬದ ಬಗ್ಗೆ ಅವರು ಯಾವುದೇ ಪ್ರಸ್ತಾಪ ಮಾಡಲಿಲ್ಲ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.