ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗಾಂಗ ರವಾನೆ: 31 ಬಾರಿ ಹಸಿರು ಕಾರಿಡಾರ್

Last Updated 12 ಮಾರ್ಚ್ 2022, 19:31 IST
ಅಕ್ಷರ ಗಾತ್ರ

ಬೆಂಗಳೂರು:ಅಂಗಾಂಗ ಕಸಿಗಾಗಿ ರಾಜ್ಯದಲ್ಲಿ ಕಳೆದ ವರ್ಷ 31 ಬಾರಿ ಹಸಿರು ಕಾರಿಡಾರ್ ಮೂಲಕ ವಿವಿಧ ಆಸ್ಪತ್ರೆಗಳಿಗೆ ಅಂಗಾಂಗಗಳನ್ನು ರವಾನೆ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಜೀವಸಾರ್ಥಕತೆ ಸಂಸ್ಥೆಯಡಿ ಅಂಗಾಂಗ ದಾನ ಪ್ರಕ್ರಿಯೆ ನಡೆಸಲಾಗುತ್ತಿದೆ. ಅಂಗಾಂಗ ವೈಫಲ್ಯ ಸಮಸ್ಯೆ ಎದುರಿಸುತ್ತಿರುವವರು ಸಂಸ್ಥೆಯಡಿ ಹೆಸರು ನೋಂದಾಯಿಸಿ, ಅಂಗಾಂಗ ಪಡೆಯಬಹುದಾಗಿದೆ. ಚೆನ್ನೈ ಸೇರಿದಂತೆ ರಾಜ್ಯದ ಹೊರ ನಗರಗಳಿಂದಲೂ ಅಂಗಾಂಗಗಳನ್ನೂ ಇಲ್ಲಿಗೆ ತರಲಾಗಿದೆ. ಹೆಚ್ಚಿನ ಬಾರಿ ಆಸ್ಟರ್‌ ಆರ್‌.ವಿ. ಆಸ್ಪತ್ರೆಗಳಿಂದ ನಾರಾಯಣ ಹೆಲ್ತ್ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

ಮಿದುಳು ನಿಷ್ಕ್ರಿಯಗೊಂಡ ಯಾವುದೇ ವ್ಯಕ್ತಿಯು ಅಂಗಾಂಗ ದಾನ ಮಾಡಬಹುದಾಗಿದ್ದು, ಅದು ಕಾನೂನುಬದ್ಧ. ಒಬ್ಬ ದಾನಿಯು ಹೃದಯ, ಮೂತ್ರಪಿಂಡ, ಯಕೃತ್ತು, ಮೇದೋಜೀರಕ ಗ್ರಂಥಿ, ಸಣ್ಣ ಕರುಳು, ಶ್ವಾಸಕೋಶ ದಾನ ಮಾಡಬಹುದು. ಚರ್ಮ, ಮೂಳೆಗಳು, ಅಸ್ಥಿ ಮಜ್ಜೆ, ಹೃದಯದ ಕವಾಟ, ಕಣ್ಣಿನ ಕಾರ್ನಿಯಾ ಸೇರಿದಂತೆ ವಿವಿಧ ಅಂಗಗಳನ್ನು ದಾನ ಮಾಡುವ ಮೂಲಕ ಹಲವು ಜೀವಗಳಿಗೆ ನೆರವಾಗಬಹುದು ಎಂದು ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT