ಸೋಮವಾರ, ಅಕ್ಟೋಬರ್ 18, 2021
22 °C
ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ನಿರ್ಧಾರ * ಡಿವಿಎಸ್‌, ಶೆಟ್ಟರ್‌, ಕಟೀಲ್‌ ನೇತೃತ್ವದಲ್ಲೂ ಪ್ರವಾಸ

ಬಿಎಸ್‌ವೈ ಪ್ರವಾಸಕ್ಕೆ ಹಸಿರು ನಿಶಾನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ರಾಜ್ಯದಾದ್ಯಂತ ಪ್ರವಾಸ ಮಾಡಲು ಬಿ.ಎಸ್‌. ಯಡಿಯೂರಪ್ಪ ಕೈಗೊಂಡಿರುವ ನಿಲುವಿಗೆ ಅಡ್ಡಿ ಪಡಿಸದಿರಲು ಶನಿವಾರ ರಾತ್ರಿ ಅಪೂರ್ವ ರೆಸಾರ್ಟ್‌ ಸಭಾಂಗಣದಲ್ಲಿ ನಡೆದ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ. ಬಿಎಸ್‌ವೈ ಅಲ್ಲದೇ ಇನ್ನೂ ಮೂರು ತಂಡಗಳು ಪ್ರವಾಸ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ.

ಕೇಂದ್ರದ ಮಾಜಿ ಸಚಿವ ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ನೇತೃತ್ವದಲ್ಲಿ ಇನ್ನೂ ಮೂರು ತಂಡಗಳು ಕೂಡ ಪ್ರವಾಸ ಕೈಗೊಳ್ಳಬೇಕು ಎಂದು ನಿರ್ಧರಿಸುವ ಮೂಲಕ ಪ್ರವಾಸದ ಗೊಂದಲಗಳಿಗೆ ತೆರೆ ಎಳೆಯಲಾಗಿದೆ.

ಮುಂದೆ ಬರುವ ವಿಧಾನ ಪರಿಷತ್‌ ಚುನಾವಣೆ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗಳಿಗೆ ಸಂಬಂಧಿಸಿದಂತೆ ಸೋಮವಾರದಿಂದಲೇ ಪ್ರಚಾರ ಕಾರ್ಯ ಕೈಗೊಳ್ಳಲು ನಿರ್ಧರಿಸಲಾಯಿತು. ದೇವಸ್ಥಾನಗಳ ತೆರವು ಕಾರ್ಯಾಚರಣೆ ಬಗ್ಗೆ ಕೂಡ ಚರ್ಚೆಗಳು ನಡೆದವು ಎಂದು ಮುಖಂಡರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು