ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಕ್ಫ್‌ ಮಂಡಳಿ ಅಧ್ಯಕ್ಷ ಸ್ಥಾನ ಚುನಾವಣೆ: ಹೈಕೋರ್ಟ್ ಹಸಿರು ನಿಶಾನೆ

Last Updated 16 ನವೆಂಬರ್ 2021, 16:25 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ವಕ್ಫಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ಹೈಕೋರ್ಟ್‌ ಹಸಿರು ನಿಶಾನೆ ತೋರಿದೆ.

ಚುನಾವಣೆ ನಡೆಸದಂತೆ ಕೋರಿ ನಗರದ ಮುತವಲ್ಲಿಮೊಹಮ್ಮದ್ ಮುಜಮ್ಮಿಲ್ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿ ವಜಾ ಮಾಡಿ ಚುನಾವಣೆ ನಡೆಸುವಂತೆ ಆದೇಶಿಸಿದೆ.

‘ಒಂದು ವೇಳೆ ಯಾವುದೇ ತಕರಾರು ಇದ್ದಲ್ಲಿ ವಕ್ಫ್‌ ಕಾಯ್ದೆ ಕಲಂ 83ರ ಅನುಸಾರ ನ್ಯಾಯಮಂಡಳಿ ಮುಂದೆ ಆಕ್ಷೇಪಿಸಿ ಮೂರು ತಿಂಗಳೊಳಗೆ ಪರಿಹಾರ ಪಡೆಯಿರಿ’ ಎಂದು ಅರ್ಜಿದಾರರಿಗೆ ನಿರ್ದೇಶಿಸಿದೆ.

‘ಹಾಲಿ ಮಂಡಳಿಯ ಚುನಾಯಿತ ಮತ್ತು ನಾಮ ನಿರ್ದೇಶಿತ ಸದಸ್ಯರ ಸಂಖ್ಯೆ ಅನುಪಾತಕ್ಕೆ ಅನುಗುಣವಾಗಿಲ್ಲ. ಆದ್ದರಿಂದ, ಚುನಾವಣೆ ನಡೆಸದಂತೆ ತಡೆ ನೀಡಬೇಕು' ಎಂದು ಅರ್ಜಿದಾರರು ಕೋರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT