ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾಡಿ ಘಾಟಿ | ಚತುಷ್ಪಥ ರಸ್ತೆ ₹ 1,976 ಕೋಟಿ ಕಾಮಗಾರಿಗೆ ಟೆಂಡರ್‌: ಗಡ್ಕರಿ

Last Updated 9 ಜನವರಿ 2023, 19:30 IST
ಅಕ್ಷರ ಗಾತ್ರ

ಮಂಗಳೂರು: ‘ಶಿರಾಡಿ ಘಾಟಿಯಲ್ಲಿ ಮಾರನಹಳ್ಳಿಯಿಂದ ಅಡ್ಡಹೊಳೆ ನಡುವೆ ರಾಷ್ಟ್ರೀಯ ಹೆದ್ದಾರಿ 75 ಅನ್ನು ಚತುಷ್ಪಥವನ್ನಾಗಿ ಅಭಿವೃದ್ಧಿಪಡಿಸುವ ₹1,976 ಕೋಟಿ ಮೊತ್ತದ ಕಾಮಗಾರಿಗೆ ಟೆಂಡರ್‌ ಆಹ್ವಾನಿಸಲಾಗಿದೆ’ ಎಂದು ಕೇಂದ್ರ ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್‌ ಕಟೀಲ್ ಅವರಿಗೆ ಪತ್ರ ಬರೆದಿರುವ ಅವರು, ‘‌ಈ ಚತುಷ್ಪಥ ಕಾಮಗಾರಿಯ ಜೊತೆಗೆ, ಮಂಗಳೂರು- ಬೆಂಗಳೂರು ನಡುವಿನ ಸಂಚಾರಕ್ಕೆ ತಗಲುವ ಪ್ರಯಾಣ ವೆಚ್ಚವನ್ನು ಕಡಿತಗೊಳಿಸುವ ಸಲುವಾಗಿ ಶಿರಾಡಿ ಘಾಟಿಯಲ್ಲಿ 23 ಕಿ.ಮೀ ಉದ್ದದ ಸುರಂಗ ಮಾರ್ಗ ನಿರ್ಮಿಸುವ ಪ್ರಸ್ತಾವವೂ ಇದೆ. ₹ 15 ಸಾವಿರ ಕೋಟಿ ವೆಚ್ಚದ ಈ ಕಾಮಗಾರಿಗೆ 2023ರ ಏಪ್ರಿಲ್ ಒಳಗೆ ಸಮಗ್ರ ಯೋಜನಾ ವರದಿಯನ್ನು (ಡಿಪಿಆರ್) ಅಂತಿಮಗೊಳಿಸಿ, ಮೇ ತಿಂಗಳಿನಲ್ಲೇ ಟೆಂಡರ್‌
ಆಹ್ವಾನಿಸಲಾಗುತ್ತದೆ’ ಎಂದು ಮಾಹಿತಿ ನೀಡಿದ್ದಾರೆ.

‘ಸಕಲೇಶಪುರದಿಂದ ಮಾರನಹಳ್ಳಿಯವರೆಗೆ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಹೆದ್ದಾರಿಯನ್ನು ತಕ್ಷಣವೇ ದುರಸ್ತಿ ಪಡಿಸಲಾಗುತ್ತದೆ. ದುರಸ್ತಿ ಕಾಮಗಾರಿಗೆ ₹12.20 ಕೋಟಿ ಅಂದಾಜು ವೆಚ್ಚವಾಗಲಿದೆ. ಇದರ ಟೆಂಡರ್‌ಗಳ ಮೌಲ್ಯಮಾಪನ ಮಾಡಲಾಗುತ್ತಿದೆ. ಗುಂಡಿ ಮುಚ್ಚುವ ಕಾಮಗಾರಿಯನ್ನು ಈ ಗುತ್ತಿಗೆದಾರರೇ ನಿರ್ವಹಿಸಲಿದ್ದಾರೆ’ ಎಂದು ಗಡ್ಕರಿ ಅವರು 2022ರ ಡಿ.20ರಂದು ತಮಗೆ ಬರೆದ ಪತ್ರವನ್ನು ನಳಿನ್‌ ಅವರು ಸೋಮವಾರ ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT