ಸೋಮವಾರ, ಮಾರ್ಚ್ 1, 2021
19 °C

ಶೇ 50 ಅತಿಥಿ ಉಪನ್ಯಾಸಕರ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಲು 7,091 ಅತಿಥಿ ಉಪನ್ಯಾಸಕರನ್ನು ಸರ್ಕಾರ ಆಯ್ಕೆ ಮಾಡಿದೆ.

ಕಾಲೇಜು ಶಿಕ್ಷಣ ಇಲಾಖೆಯು 14,183 ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸಲು ಅನುಮತಿ ನೀಡುವಂತೆ ಹಣಕಾಸು ಇಲಾಖೆಗೆ ಪ್ರಸ್ತಾವ ಸಲ್ಲಿಸಿತ್ತು. ಈ ಪೈಕಿ, ಶೇ 50ರಷ್ಟು ಉಪನ್ಯಾಸಕರ ಮುಂದುವರಿಕೆಗೆ ಮಾತ್ರ ಅನುಮತಿ ದೊರೆತಿದೆ.

ಮಾರ್ಚ್‌ನಲ್ಲಿ ಕೆಲಸ ನಿರ್ವಹಿಸಿದವರ ಸೇವೆಯನ್ನು ಮುಂದುವರಿಸಬೇಕು. ಕಾರ್ಯಭಾರಕ್ಕೆ ಅನುಗುಣವಾಗಿ ಉಪನ್ಯಾಸಕರ ಸಂಖ್ಯೆ ಕಡಿಮೆ ಮಾಡಬೇಕು. ಸೇವಾ ಜೇಷ್ಠತೆ ಹೊಂದಿರುವ ಅತಿಥಿ ಉಪನ್ಯಾಸಕರನ್ನು ಮುಂದುವರಿಸಬೇಕು ಮತ್ತು ಕಡಿಮೆ ಅವಧಿಗೆ ಸೇವೆ ಸಲ್ಲಿಸಿದವರನ್ನು ಕೈಬಿಡಬೇಕು ಎಂದು ಆರ್ಥಿಕ ಇಲಾಖೆ ಷರತ್ತು ವಿಧಿಸಿದೆ. ಅಲ್ಲದೆ, 2021ರ ಮಾರ್ಚ್‌ವರೆಗೆ ಮಾತ್ರ ನೇಮಕ ಮಾಡಿಕೊಳ್ಳತಕ್ಕದ್ದು ಎಂದೂ ಹೇಳಿದೆ.

ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಕೊರತೆಯಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ‘ಪ್ರಜಾವಾಣಿ’ಯಲ್ಲಿ ವರದಿ ಪ್ರಕಟವಾಗಿತ್ತು.

 

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು