ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಭಾವನೆ ಹೆಚ್ಚಳ: ಸಚಿವ ಬಿ.ಸಿ ನಾಗೇಶ್

ಬೆಂಗಳೂರು: ರಾಜ್ಯದಲ್ಲಿ ಪದವಿ ಪೂರ್ವ ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಯನ್ನು ₹ 3,000 ಹೆಚ್ಚಳ ಮಾಡಲಾಗಿದೆ ಎಂದು ಪ್ರಾರ್ಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಟ್ವೀಟ್ ಮಾಡಿದ್ದಾರೆ.
ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಯನ್ನು ಪರಿಷ್ಕರಣೆ ಮಾಡಲಾಗಿದ್ದು, ₹9,000 ದಿಂದ ₹12,000 ಕ್ಕೆ ಹೆಚ್ಚಳ ಮಾಡಲಾಗಿದೆ ಸರ್ಕಾರ ಆದೇಶ ಹೊರಡಿಸಿದೆ. ಪ್ರಸಕ್ತ ಸಾಲಿನಲ್ಲಿ ಉಪನ್ಯಾಸಕರ ಕೊರತೆ ನೀಗಿಸಲು 3,708 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಬಿ.ಸಿ ನಾಗೇಶ್ ಟ್ವೀಟ್ ಮಾಡಿದ್ದಾರೆ.
ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಯನ್ನು 'ಪರಿಷ್ಕರಣೆ' ಮಾಡಲಾಗಿದ್ದು, ₹9,000 ದಿಂದ ₹12,000 ಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರಸಕ್ತ ಸಾಲಿನಲ್ಲಿ ಉಪನ್ಯಾಸಕರ ಕೊರತೆ ನೀಗಿಸಲು '3,708 ಅತಿಥಿ ಉಪನ್ಯಾಸಕ'ರ ಸೇವೆಯನ್ನು ಪಡೆಯಲಾಗುತ್ತಿದೆ.@BSBommai
— B.C Nagesh (@BCNagesh_bjp) July 6, 2022
ತಿಂಗಳಿಗೆ ₹ 15 ಸಾವಿರದಿಂದ ₹ 20 ಸಾವಿರ ಗೌರವ ವೇತನ ನೀಡಬೇಕೆಂದು ಅತಿಥಿ ಉಪನ್ಯಾಸಕರು ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದರು. ಆದರೆ ಸರ್ಕಾರ ₹ 12,000 ಗೌರವಧನ ನಿಗಧಿಪಡಿಸಿ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ 1,250ಕ್ಕೂ ಹೆಚ್ಚು ಪದವಿ ಪೂರ್ವ ಕಾಲೇಜುಗಳಿದ್ದು, ಸುಮಾರು 3,267 ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.