ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತಿಥಿ ಉಪನ್ಯಾಸಕರಿಗೆ ಶೀಘ್ರದಲ್ಲಿ ವೇತನ ಪಾವತಿ: ಮುಖ್ಯಮಂತ್ರಿ ಘೋಷಣೆ

Last Updated 22 ಸೆಪ್ಟೆಂಬರ್ 2020, 10:00 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 14,447 ಉಪನ್ಯಾಸಕರಿಗೆ ಶೀಘ್ರದಲ್ಲಿ ಬಾಕಿ ವೇತನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ವಿಧಾನ‌ ಪರಿಷತ್‌ನಲ್ಲಿ ಪ್ರಕಟಿಸಿದರು.

ಕೊರೊನಾ ಲಾಕ್‌ಡೌನ್ ಕಾರಣದಿಂದ ಕಾಲೇಜುಗಳು ಮುಚ್ಚಿವೆ. ಮಾರ್ಚ್ ತಿಂಗಳವರೆಗೆ ಎಲ್ಲ ಅತಿಥಿ ಉಪನ್ಯಾಸಕರಿಗೆ ವೇತನ ಪಾವತಿಸಲಾಗಿದೆ. ಏಪ್ರಿಲ್‌ನಿಂದ ಆಗಸ್ಟ್ ವರೆಗಿನ ವೇತನವನ್ನು ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಅತಿಥಿ ಉಪನ್ಯಾಸಕರಿಗೆ ವೇತನ ಪಾವತಿಸುವಂತೆ ಆಗ್ರಹಿಸಿ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ವಿಧಾನ ಪರಿಷತ್ತಿನಲ್ಲಿ ಧರಣಿ ಆರಂಭಿಸಿದ್ದರು. ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರೂ ಧರಣಿಗೆ ಬೆಂಬಲ‌ ನೀಡಿದ್ದರು. ಸದನಕ್ಕೆ ಬಂದ ಮುಖ್ಯಮಂತ್ರಿ ವೇತನ ಪಾವತಿಸುವುದಾಗಿ ಪ್ರಕಟಿಸಿದರು. ಬಳಿಕ ಸದಸ್ಯರು ಧರಣಿ ಹಿಂಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT