ಶನಿವಾರ, ಏಪ್ರಿಲ್ 17, 2021
27 °C
ಪ್ರಜಾವಾಣಿ–ಡೆಕ್ಕನ್‌ ಹೆರಾಲ್ಡ್‌ ಆಯೋಜಿಸಿದ್ದ ‘ಗೈಡಿಂಗ್‌ ಫೋರ್ಸ್‌’

ಐಎಎಸ್‌, ಐಪಿಎಸ್‌ ಆಕಾಂಕ್ಷಿಗಳ ಕಣ್ಣಲ್ಲಿ ನಿರೀಕ್ಷೆಯ ಹೊಳ‍ಪು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಐಎಎಸ್‌, ಐಪಿಎಸ್‌ ಅಧಿಕಾರಿಗಳು ಆಗುವ ಕನಸು ಹೊತ್ತು ಬಂದಿದ್ದವರ ಕಣ್ಣುಗಳಲ್ಲಿ ಹೊಳಪು ಮೂಡಿತು. ಕನಸು ನನಸು ಮಾಡುವ ಹಂಬಲ ಮತ್ತಷ್ಟು ಹೆಚ್ಚಾಯಿತು.

‘ಪ್ರಜಾವಾಣಿ’ ಹಾಗೂ ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕಾ ಬಳಗವು ಬೆಂಗಳೂರಿನ ‘ಇನ್‌ಸೈಟ್ಸ್‌ ಐಎಎಸ್‌’ ಸಹಯೋಗದಲ್ಲಿ ಶನಿವಾರ ನಗರದಲ್ಲಿ ಹಮ್ಮಿಕೊಂಡಿದ್ದ ‘ಗೈಡಿಂಗ್‌ ಫೋರ್ಸ್‌’ ಕಾರ್ಯಕ್ರಮವು ಇದಕ್ಕೆ ಕಾರಣವಾಯಿತು.

ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿಯಲ್ಲಿ ನುರಿತವರ ಮಾತು ಒಂದು ಕಡೆ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾದವರ ಅನುಭವದ ಮಾತು ಇನ್ನೊಂದು ಕಡೆ ಮಿಂಚು ಹರಿಸಿತು.

ಕಾರ್ಯಕ್ರಮ ಉದ್ಘಾಟಿಸಿದ ದಾವಣಗೆರೆ ವಿಶ್ವವಿದ್ಯಾಲಯದ ಕುಲಸಚಿವರಾದ (ಆಡಳಿತ) ಪ್ರೊ. ಗಾಯತ್ರಿ ದೇವರಾಜ ಅವರು ಸ್ಪರ್ಧಾತ್ಮಕ ಪರೀಕ್ಷೆಗೆ ಮಾನಸಿಕವಾಗಿ ಸಜ್ಜಾಗುವುದು ಹೇಗೆ ಎಂಬುದನ್ನು ತಿಳಿಸಿಕೊಟ್ಟರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ಸ್ವತಃ ಎದುರಿಸಿದಾಗಿನ ಅನುಭವಗಳನ್ನು ಹಂಚಿಕೊಂಡು ವಿದ್ಯಾರ್ಥಿಗಳಲ್ಲಿ ಸ್ಫೂರ್ತಿ ತುಂಬಿದರು.

‘ಇನ್‌ಸೈಟ್ಸ್‌ ಐಎಎಸ್‌’ ಸಂಸ್ಥಾಪಕ ಮತ್ತು ನಿರ್ದೇಶಕ ಜಿ.ಬಿ. ವಿನಯಕುಮಾರ್, ಸಂಸ್ಥೆಯ ಸಂಪನ್ಮೂಲ ಅಧಿಕಾರಿಗಳಾದ ಪ್ರದೀಪ್‌ ಕುಮಾರ್‌, ಶಮಂತ ಗೌಡ ಅವರು ಪರೀಕ್ಷೆಯ ಸಿದ್ಧತೆಗಳ ಬಗ್ಗೆ ಬೆಳಕು ಚೆಲ್ಲಿದರು. ಕಾಂಕ್ಷಿಗಳು ಪ್ರಶ್ನೆಗಳನ್ನು ಕೇಳಿ ತಮಗಿರುವ ಗೊಂದಲಗಳನ್ನು ಪರಿಹರಿಸಿಕೊಂಡರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು