ಶುಕ್ರವಾರ, 8 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೋಗದಲ್ಲಿ ಗಿನ್ನಿಸ್ ದಾಖಲೆ: ನಾರಾಯಣಗೌಡ

Last Updated 15 ಜನವರಿ 2023, 16:34 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಾದ್ಯಂತ 6 ಲಕ್ಷಕ್ಕೂ ಅಧಿಕ ಜನರು ಏಕಕಾಲಕ್ಕೆ ಯೋಗಾಭ್ಯಾಸ ಮಾಡುವ ಮೂಲಕ ಗಿನ್ನಿಸ್ ದಾಖಲೆ ಬರೆಯಲಾಗಿದೆ’ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ನಾರಾಯಣಗೌಡ ತಿಳಿಸಿದರು.

ಇಲಾಖೆಯು ಕಂಠೀರವ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಗಿನ್ನಿಸ್ ದಾಖಲೆ ಪ್ರಯತ್ನ ‘ಯೋಗಥಾನ್‌’ನ ಕಾರ್ಯಕ್ರಮವನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಉದ್ಘಾಟಿಸಿದರು.

‘ಈ ಹಿಂದೆ ರಾಜಸ್ಥಾನದಲ್ಲಿ ಏಕಕಾಲದಲ್ಲಿ 1.60 ಲಕ್ಷ ಜನರು ಯೋಗ ಮಾಡುವ ಮೂಲಕ ಗಿನ್ನಿಸ್ ದಾಖಲೆ ಸೃಷ್ಟಿಸಿದ್ದರು. ಈಗ ಆ ದಾಖಲೆಯನ್ನು ಮುರಿಯಲಾಗಿದೆ. ಏಕಕಾಲದಲ್ಲಿ ಐದು ಲಕ್ಷ ಜನ ಯೋಗ ಮಾಡುವ ಗುರಿ ಹಾಕಿಕೊಳ್ಳಲಾಗಿತ್ತು. 6 ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಿ, ಯೋಗ ಮಾಡಿದ್ದಾರೆ’ ಎಂದು ನಾರಾಯಣಗೌಡ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT