ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಪಸೆ, ಆಳ್ವಗೆ ಪುಸ್ತಕ ಪ್ರಾಧಿಕಾರ ಪ್ರಶಸ್ತಿ

‘ರಾಷ್ಟ್ರೋತ್ಥಾನ ಸಾಹಿತ್ಯ’ಕ್ಕೆ ‘ಅತ್ಯುತ್ತಮ ಪ್ರಕಾಶನ ಪ್ರಶಸ್ತಿ’
Last Updated 4 ಜೂನ್ 2022, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರವು 2021ನೇ ಸಾಲಿನ ವಿವಿಧ ವಾರ್ಷಿಕ ಪ್ರಶಸ್ತಿಗಳನ್ನು ಶನಿವಾರ ಪ್ರಕಟಿಸಿದೆ. ₹ 75 ಸಾವಿರ ನಗದು ಬಹುಮಾನ ಹೊಂದಿರುವ ‘ಡಾ.ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’ಗೆ ಧಾರವಾಡದ ಸಾಹಿತಿ ಗುರುಲಿಂಗ ಕಾಪಸೆ ಆಯ್ಕೆಯಾಗಿದ್ದಾರೆ.

ಪ್ರಾಧಿಕಾರದ ಅಧ್ಯಕ್ಷ ಡಾ.ಎಂ.ಎನ್. ನಂದೀಶ್ ಹಂಚೆ ಅವರ ನೇತೃತ್ವದಲ್ಲಿ ಈ ಆಯ್ಕೆಗಳು ನಡೆದಿವೆ.

‘ಅತ್ಯುತ್ತಮ ಪ್ರಕಾಶನ ಪ್ರಶಸ್ತಿ’ಗೆ ಬೆಂಗಳೂರಿನ‘ರಾಷ್ಟ್ರೋತ್ಥಾನ ಸಾಹಿತ್ಯ’ ಭಾಜನವಾಗಿದೆ. ಈ ಪ್ರಶಸ್ತಿಯು ₹ 1 ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ‘ಡಾ.ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’ಗೆ ಮೂಡುಬಿದಿರೆಯಡಾ.ಎಂ. ಮೋಹನ್ ಆಳ್ವಅವರನ್ನು ಆಯ್ಕೆ ಮಾಡಲಾಗಿದೆ.

‘ಡಾ.ಅನುಪಮಾ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿ’ಗೆ ಬೆಂಗಳೂರಿನಡಾ.ನಾ. ಸೋಮೇಶ್ವರ ಅವರು ಭಾಜನರಾಗಿದ್ದಾರೆ. ಈ ಪ್ರಶಸ್ತಿಗಳು ಕ್ರಮವಾಗಿ ₹ 50 ಸಾವಿರ ಹಾಗೂ ₹ 25 ಸಾವಿರ ನಗದು, ಪ್ರಶಸ್ತಿ ಫಲಕ ಒಳಗೊಂಡಿವೆ.

2021ನೇ ಸಾಲಿನ ಕನ್ನಡ ಪುಸ್ತಕ ಸೊಗಸು ಹಾಗೂ ಮುದ್ರಣ ಸೊಗಸು ಬಹುಮಾನವನ್ನೂ ಪ್ರಕಟಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT