ಸೋಮವಾರ, ಮೇ 23, 2022
30 °C

ಸಂತೋಷ್ ಪಾಟೀಲ ಆತ್ಮಹತ್ಯೆ ಹಿಂದೆ ರಾಜಕೀಯ ಬಣ್ಣ: ಎಚ್.ಡಿ.ದೇವೇಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಹಿಂದೆ ರಾಜಕೀಯ ಬಣ್ಣವಿದ್ದಂತೆ ಕಾಣುತ್ತಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು.

ಪಕ್ಷದ ರಾಜ್ಯ ಕಚೇರಿಯಲ್ಲಿ ಗುರುವಾರ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,‘ಈ ಪ್ರಕರಣದ ವಿಚಾರದಲ್ಲಿ ಯಾರೆಲ್ಲ ಏನೇನು ಹೇಳಿದ್ದಾರೆ ಎಂಬುದು ಗೊತ್ತಿದೆ. ನಾನು ಯಾರ ಬಗ್ಗೆಯೂ ವೈಯಕ್ತಿಕವಾಗಿ ಮಾತನಾಡುವುದಿಲ್ಲ’ ಎಂದರು.

‘ನಾನು ಕೂಡ ಆಡಳಿತ ನಡೆಸಿದ್ದೇನೆ. ಯಾರ ಕಾಲದಲ್ಲಿ ಏನಾಗಿದೆ, ಎಷ್ಟು ಲಂಚ ಪಡೆದು ಸರ್ಕಾರ ನಡೆಸಿದ್ದಾರೆ ಎಂಬುದರ ಬಗ್ಗೆ ಈಗ ಮಾತನಾಡುವುದಿಲ್ಲಘಿ. ಈ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆ ಕುರಿತೂ ಪ್ರತಿಕ್ರಿಯಿಸುವುದಿಲ್ಲ. ಶೇಕಡ 40ರಷ್ಟು ಲಂಚದ ಆರೋಪದ ಕುರಿತು ಮಾತನಾಡುವ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಇಲ್ಲ’ ಎಂದು ಹೇಳಿದರು.

ಸಿ.ಎಂ. ಇಬ್ರಾಹಿಂ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರಾಗುತ್ತಾರೆ. ಈಗ ಅಧ್ಯಕ್ಷರಾಗಿರುವ ಎಚ್.ಕೆ. ಕುಮಾರಸ್ವಾಮಿ ಅವರು ಸಂಸದೀಯ ಮಂಡಳಿ ಅಧ್ಯಕ್ಷರಾಗುತ್ತಾರೆ. ಇಬ್ಬರೂ ಜತೆಯಾಗಿ ಪಕ್ಷದ ಕೆಲಸ ಮಾಡಲಿದ್ದಾರೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು