ಸೋಮವಾರ, ಮಾರ್ಚ್ 20, 2023
30 °C

ವಿಶ್ವನಾಥ್‌–ಯತ್ನಾಳ ಗೋಪ್ಯ ಮಾತುಕತೆ: ರಾಜಕೀಯ ವಲಯದಲ್ಲಿ ಸಂಚಲನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಶಾಸಕ ಬಸನಗೌಡ ಪಾಟೀಲ ಯತ್ನಾಳ, ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಭೇಟಿಯಾಗಿ ಚರ್ಚೆ ನಡೆಸಿದ್ದು, ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಈ ಇಬ್ಬರೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಮಾಡುತ್ತಿರುವವರು. ಮುಖ್ಯಮಂತ್ರಿ ಬದಲಾವಣೆಗಾಗಿ ಒತ್ತಾಯಿಸುತ್ತಿರುವವರು. ಈ ಇಬ್ಬರ ಭೇಟಿ ಕುತೂಹಲ ಕೆರಳಿಸಿದೆ.

ಸುತ್ತೂರು ಮಠಕ್ಕೆ ಹೋಗಿದ್ರಾ? ಎಂದು ವಿಶ್ವನಾಥ್‌ ಕೇಳಿದ್ದಕ್ಕೆ; ‘ಈ ಹಿಂದೆ ಸಾಕಷ್ಟು ಬಾರಿ ಹೋಗಿದ್ದೆ. ಈ ಬಾರಿ ಹೋಗಿಲ್ಲ. ಎಲ್ಲರಿಗಿಂತ ಸ್ವಲ್ಪ ಡಿಫರೆಂಟ್ ಇರಬೇಕಲ್ವಾ..?’ ಎಂದು ಬಸನಗೌಡ ಪ್ರತಿಕ್ರಿಯಿಸಿದರು.

ಚಾಮುಂಡಿ ಬೆಟ್ಟ, ನಂಜನಗೂಡು, ದೇವನೂರು ಮಠ, ಹೊಸ ಮಠಕ್ಕೆ ಭೇಟಿ ನೀಡಿದ್ದ ಯತ್ನಾಳ ವಿಶ್ವನಾಥ್‌ ಜೊತೆ ಉಭಯ ಕುಶಲೋಪರಿ ಹಂಚಿಕೊಂಡರು. ನಂತರ ಇಬ್ಬರೂ ಕೊಠಡಿಯೊಂದರಲ್ಲಿ ಗೋಪ್ಯ ಮಾತುಕತೆ ನಡೆಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು