ಸೋಮವಾರ, ಸೆಪ್ಟೆಂಬರ್ 27, 2021
22 °C
ವಿರೋಧ ಪಕ್ಷದ ನಾಯಕರ ವಿರುದ್ಧವೂ ವಾಗ್ದಾಳಿ

ಜಿಂದಾಲ್‌ಗೆ ಭೂಮಿ ಮಾರಾಟ: ಸರ್ಕಾರ ತಂದಿದ್ದಕ್ಕೆ ವ್ಯಥೆ -ಎಚ್‌.ವಿಶ್ವನಾಥ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ‘ಒಂದು ಎಕರೆಗೆ ₹ 1 ಕೋಟಿ ಬೆಲೆಬಾಳುವ 3,667 ಎಕರೆ ಭೂಮಿಯನ್ನು ₹ 1.12 ಲಕ್ಷದಂತೆ ಜಿಂದಾಲ್‌ಗೆ ಮಾರಾಟ ಮಾಡಲು, ಗುರುವಾರ (ಮೇ 27) ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಕೊಡಬಾರದು’ ಎಂದು ವಿಧಾನ ಪರಿಷತ್ ಸದಸ್ಯ ಎಚ್‌.ವಿಶ್ವನಾಥ್‌, ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

‘ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಭೂಮಿ ಮಾರಾಟ ವಿರೋಧಿಸಿ, ಸದನದಲ್ಲೇ ಮೊಕ್ಕಾಂ ಹೂಡಿ ಪ್ರತಿಭಟಿಸಿದ್ದ ಆಗಿನ ವಿರೋಧ ಪಕ್ಷದ ನಾಯಕ, ಮುಖ್ಯಮಂತ್ರಿಯಾದ ಬಳಿಕ ಇದೀಗ ಅದನ್ನೇ ಮಾರಲು ಮುಂದಾಗಿದ್ದಾರೆ. ಈ ಸರ್ಕಾರ ತಂದಿದ್ದಕ್ಕೆ ವ್ಯಥೆಯಾಗುತ್ತಿದೆ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು