ಮಂಗಳವಾರ, ಜುಲೈ 5, 2022
25 °C

ರಾಜ್ಯದಲ್ಲಿ 3 ವರ್ಷಗಳಲ್ಲಿ 571 ಬಾಲ್ಯ ವಿವಾಹ ಪ್ರಕರಣ: ಹಾಲಪ್ಪ ಆಚಾರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ 2018–19ರಿಂದ 2020–21ರವರೆಗಿನ ಮೂರು ವರ್ಷಗಳ ಅವಧಿಯಲ್ಲಿ 571 ಬಾಲ್ಯ ವಿವಾಹ ಪ್ರಕರಣಗಳು ನಡೆದಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್‌ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ವಿರೋಧ ಪಕ್ಷದ ಉಪ ನಾಯಕ ಕೆ. ಗೋವಿಂದರಾಜ್‌ ಪ್ರಶ್ನೆಗೆ ಮಂಗಳವಾರ ಉತ್ತರಿಸಿದ ಸಚಿವರು, ‘2018–19ರಲ್ಲಿ 119, 2019–20ರಲ್ಲಿ 156 ಮತ್ತು 2020–21ರಲ್ಲಿ 296 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿವೆ. 417 ಪ್ರಕರಣಗಳಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ರಾಷ್ಟ್ರೀಯ ಅಪರಾಧ ಪ್ರಕರಣಗಳ ಬ್ಯೂರೊ (ಎನ್‌ಸಿಆರ್‌ಬಿ) ವರದಿ ಪ್ರಕಾರ, ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಬಾಲ್ಯ ವಿವಾಹ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ’ ಎಂದರು.

ಮೂರು ವರ್ಷಗಳಲ್ಲಿ ಮಂಡ್ಯ ಜಿಲ್ಲೆಯಲ್ಲಿ ಅತ್ಯಧಿಕ ಅಂದರೆ 59 ಬಾಲ್ಯ ವಿವಾಹಗಳು ನಡೆದಿವೆ. ರಾಮನಗರ ಜಿಲ್ಲೆಯಲ್ಲಿ 51, ಹಾಸನ ಜಿಲ್ಲೆಯಲ್ಲಿ 42, ಮೈಸೂರು ಜಿಲ್ಲೆಯಲ್ಲಿ 38, ಬೆಳಗಾವಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ 37 ಬಾಲ್ಯ ವಿವಾಹಗಳು ನಡೆದಿರುವುದು ವರದಿಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಮೂರು ವರ್ಷಗಳಲ್ಲಿ  ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ಸಚಿವರು ವಿವರ ನಿಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು