ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಂಪಿ ಕನ್ನಡ ವಿ.ವಿ: ಗೊರುಚ, ಭಾಷ್ಯಂ ಸ್ವಾಮಿ, ವೆಂಕಟಾಚಲ ಶಾಸ್ತ್ರಿಗೆ ನಾಡೋಜ

Last Updated 7 ಏಪ್ರಿಲ್ 2022, 7:54 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಸಾಹಿತಿಗಳಾದ ಗೊ.ರು. ಚನ್ನಬಸಪ್ಪ, ಭಾಷ್ಯಂ ಸ್ವಾಮಿ ಹಾಗೂ ಪ್ರೊ.ಟಿ.ವಿ. ವೆಂಕಟಾಚಲ ಶಾಸ್ತ್ರಿ ಅವರನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯದ ನಾಡೋಜ ಗೌರವ ಪದವಿಗೆ ಆಯ್ಕೆ ಮಾಡಲಾಗಿದೆ.

ಜಿ. ಕೃಷ್ಣಪ್ಪ, ಮಲೆಯೂರು ಗುರುಸ್ವಾಮಿ, ಡಾ. ಎಸ್.ಸಿ. ಶರ್ಮಾ, ಗುರುಲಿಂಗ ಕಾಪಸೆ, ಡಾ. ಶಿವಾನಂದ ನಾಯಕ, ರಮೇಶ ಎಂ.ಕೆ,., ನಾಸೀರ್ ಅಹಮ್ಮದ್ ಸೇರಿದಂತೆ ಒಟ್ಟು ಹತ್ತು ಜನರ ಹೆಸರು ನಾಡೋಜಕ್ಕೆ ಶಿಫಾರಸು ಮಾಡಲಾಗಿತ್ತು. ಅಂತಿಮವಾಗಿ ರಾಜ್ಯಪಾಲರು ಮೂವರ ಹೆಸರಿಗೆ ಅಂಕಿತ ಹಾಕಿದ್ದಾರೆ ಎಂದು ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸ.ಚಿ.ರಮೇಶ, ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡರು.

ಏಪ್ರಿಲ್ 12ರಂದು ಸಂಜೆ 5.30ಕ್ಕೆ ಕನ್ನಡ ವಿಶ್ವವಿದ್ಯಾಲಯದ ನವರಂಗ ಬಯಲು ರಂಗಮಂದಿರದಲ್ಲಿ ನಡೆಯಲಿರುವ ನುಡಿಹಬ್ಬದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ನಾಡೋಜ ಪ್ರದಾನ ಮಾಡುವರು. ಚಿತ್ರದುರ್ಗದ ಮುರುಘಾ ಶರಣರು, ಪತ್ರಕರ್ತ ಪದ್ಮರಾಜ ದಂಡಾವತಿ, ಕೆಂಪೇಗೌಡ ಅಧ್ಯಯನ ಕೇಂದ್ರದ ಮುಖ್ಯಸ್ಥ ಬಿ.ಎಸ್. ಪುಟ್ಟಸ್ವಾಮಿ, ಪರಿಸರ ಹೋರಾಟಗಾರ ಕಲ್ಕುಳಿ ವಿಠ್ಠಲ ಹೆಗಡೆ ಅವರಿಗೆ ಡಿ.ಲಿಟ್ ಹಾಗೂ 1387 ವಿದ್ಯಾರ್ಥಿಗಳಿಗೆ ವಿವಿಧ ಪದವಿಯನ್ನು ಉನ್ನತ ಶಿಕ್ಷಣ ಸಚಿವ ಡಾ.. ಸಿ.ಎನ್. ಅಶ್ವತ್ಥನಾರಾಯಣ ಪ್ರದಾನ ಮಾಡುವರು. ಆಂಧ್ರ ಪ್ರದೇಶದ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಕುಲಪತಿ ತೇಜಸ್ವಿ ವಿ. ಕಟ್ಟೀಮನಿ ಘಟಿಕೋತ್ಸವ ಭಾಷಣ ಮಾಡುವರು ಎಂದು ವಿವರಿಸಿದರು.

ಭ್ರಷ್ಟಾಚಾರದ ಆರೋಪ, ಸಿಬ್ಬಂದಿ ಆಡಳಿತದ ನಡುವಿನ ಸಂಘರ್ಷ ದ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಕುಲಪತಿ ಉತ್ತರಿಸಲು ನಿರಾಕರಿಸಿದರು. ಕುಲಸಚಿವ ಪ್ರೊ.ಎ. ಸುಬ್ಬಣ್ಣ ರೈ ಹಾಗೂ ಹಿರಿಯ ಪ್ರಾಧ್ಯಾಪಕರು ಇದ್ದರು.

ಸುದ್ದಿಗೋಷ್ಠಿಯಲ್ಲಿ ಕುಲಪತಿ ಪ್ರೊ.ಸ.ಚಿ. ರಮೇಶ ಮಾತನಾಡಿದರು
ಸುದ್ದಿಗೋಷ್ಠಿಯಲ್ಲಿ ಕುಲಪತಿ ಪ್ರೊ.ಸ.ಚಿ. ರಮೇಶ ಮಾತನಾಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT