ಭಾನುವಾರ, ಆಗಸ್ಟ್ 14, 2022
26 °C

ವಿಶ್ವ ಯೋಗ ದಿನಕ್ಕೆ ರಾಜ್ಯದಿಂದ ಹಂಪಿ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ವಿಶ್ವ ಯೋಗ ದಿನಾಚರಣೆ ನಿಮಿತ್ತ ಕೇಂದ್ರ ಸಂಸ್ಕೃತಿ ಸಚಿವಾಲಯವು ದೇಶದ 75 ಪಾರಂಪರಿಕ ಸ್ಥಳಗಳಲ್ಲಿ ಸೋಮವಾರ (ಜೂ.21) ಬೆಳಿಗ್ಗೆ 6ಕ್ಕೆ ಏಕಕಾಲಕ್ಕೆ ಕಾರ್ಯಕ್ರಮ ಆಯೋಜಿಸಿದ್ದು, ರಾಜ್ಯದಿಂದ ಹಂಪಿ ಆಯ್ಕೆಯಾಗಿದೆ.

75 ಸ್ಥಳಗಳ ಪೈಕಿ 35 ಸ್ಥಳಗಳಲ್ಲಿ ನಡೆಯುವ ಕಾರ್ಯಕ್ರಮದ ನೇರಪ್ರಸಾರ ದೂರದರ್ಶನ ವಾಹಿನಿ
ಯಲ್ಲಿ ಆಗಲಿದೆ. ಅದರಲ್ಲಿ ಹಂಪಿ ಕೂಡ ಸೇರಿದೆ. ಈಗಾಗಲೇ ಸಂಸ್ಕೃತಿ ಸಚಿವಾಲಯ ಹಾಗೂ ದೂರದರ್ಶನದ ಸಿಬ್ಬಂದಿ ಹಂಪಿಯಲ್ಲಿ ಬೀಡು ಬಿಟ್ಟಿದ್ದು, ಅಗತ್ಯ ಸಿದ್ಧತೆ ಮಾಡಿಕೊಂಡಿದ್ದಾರೆ.

‘20 ಜನ ಅಂತರ ಕಾಯ್ದುಕೊಂಡು ಯೋಗಾಸನ ಮಾಡುವರು. ಪ್ರಧಾನಿ ನರೇಂದ್ರ ಮೋದಿಯವರು ಕಾರ್ಯಕ್ರಮ ವೀಕ್ಷಿಸುವರು’ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಡೆಪ್ಯುಟಿ ಸೂಪರಿಂಟೆಂಡೆಂಟ್‌ ಪಿ. ಕಾಳಿಮುತ್ತು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು