ಗುರುವಾರ , ಮಾರ್ಚ್ 30, 2023
22 °C

ಹಾನಗಲ್‌ ಫಲಿತಾಂಶದ ಬಗ್ಗೆ ಆತ್ಮಾವಲೋಕನ: ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹಾನಗಲ್‌ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಹಿನ್ನಡೆಯ ನಿರೀಕ್ಷೆ ಇರಲಿಲ್ಲ. ಈ ಬಗ್ಗೆ ಎಲ್ಲ ನಾಯಕರೂ ಕುಳಿತು ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ ಎಂದು ಬಿಜೆಪಿಯ ಶಾಸಕ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಸಿಂದಗಿಯಲ್ಲಿ ಭೂಸನೂರು ಅವರು ನಮ್ಮ ನಿರೀಕ್ಷೆಗೂ ಮೀರಿ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದಾರೆ. ಆದರೆ ಹಾನಗಲ್‌ನಲ್ಲಿ ಗೆಲ್ಲುವ ನಿರೀಕ್ಷೆ ಇತ್ತು. ಪರಿಸ್ಥಿತಿಯೂ ಅನುಕೂಲಕರವಾಗಿತ್ತು. ಅಲ್ಲಿ ಏನಾಯಿತು ಎಂಬ ಬಗ್ಗೆ ಎಲ್ಲ ನಾಯಕರೂ ಸೇರಿ ಚರ್ಚೆ ಮಾಡುತ್ತೇವೆ ಎಂದರು.

ಓದಿ: 

ಹಾನಗಲ್ ಗೆದ್ದ ಮಾತ್ರಕ್ಕೆ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ನಾಯಕರು ಅವರು ಬೀಗಬೇಕಾಗಿಲ್ಲ. ಮುಂದಿನ 15 ದಿನಗಳ ಬಳಿಕ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಪ್ರವಾಸ ಮಾಡಿ ಕಾರ್ಯಕರ್ತರನ್ನು ಸಂಘಟಿಸುವ ಕೆಲಸ ಮಾಡುತ್ತೇನೆ. ಮುಂದಿನ ಚುನಾವಣೆಯಲ್ಲಿ 140 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೆ ಅಧಿಕಾರ ಹಿಡಿಯುವುದು ನಿಶ್ಚಿತ ಎಂದು ಯಡಿಯೂರಪ್ಪ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು