ಮಂಗಳವಾರ, ಅಕ್ಟೋಬರ್ 26, 2021
23 °C

ಹಾನಗಲ್‌, ಸಿಂದಗಿ ಉಪ ಚುನಾವಣ: ಶ್ರೀನಿವಾಸ ಮಾನೆ, ಮನಗೂಳಿಗೆ ಕಾಂಗ್ರೆಸ್‌ ಟಿಕೆಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಜ್ಯದ ಹಾನಗಲ್‌ ಮತ್ತು ಸಿಂದಗಿ ವಿಧಾನಸಭೆ ಕ್ಷೇತ್ರಗಳಿಗೆ ಅಕ್ಟೋಬರ್‌ 30ರಂದು ನಡೆಯಲಿರುವ ಉಪ ಚುನಾವಣೆಗೆ ತನ್ನ ಅಭ್ಯರ್ಥಿಗಳನ್ನು ಕಾಂಗ್ರೆಸ್‌ ಮಂಗಳವಾರ ಸಂಜೆ ಘೋಷಿಸಿದೆ.

ಹಾನಗಲ್‌ನಿಂದ ವಿಧಾನ ಪರಿಷತ್‌ ಸದಸ್ಯ ಶ್ರೀನಿವಾಸ ಮಾನೆ ಹಾಗೂ ಸಿಂದಗಿಯಿಂದ ಅಶೋಕ ಮನಗೂಳಿ ಅವರಿಗೆ ಟಿಕೆಟ್‌ ನೀಡಲಾಗಿದೆ.

ಸಿಂದಗಿ ಕ್ಷೇತ್ರದ ಜೆಡಿಎಸ್‌ ಶಾಸಕರಾಗಿದ್ದ ಎಂ.ಸಿ. ಮನಗೂಳಿ ಅವರ ಪುತ್ರ ಅಶೋಕ  ಮನಗೂಳಿ ಅವರೇ ಪಕ್ಷದ ಅಭ್ಯರ್ಥಿ ಎಂದು ಈ ಮೊದಲೇ ಮೌಖಿಕವಾಗಿ ಘೋಷಿಸಲಾಗಿತ್ತಾದರೂ, ಇದೀಗ ಅಧಿಕೃತವಾಗಿ ಟಿಕೆಟ್‌ ನೀಡಲಾಗಿದೆ.

2018ರ ಚುನಾವಣೆಯಲ್ಲಿ ಹಾನಗಲ್‌ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ಶ್ರೀನಿವಾಸ ಮಾನೆ ಹಾಗೂ ಕ್ಷೇತ್ರವನ್ನು ಮೊದಲು ಪ್ರತಿನಿಧಿಸಿದ್ದ ಮನೋಹರ ತಹಶೀಲ್ದಾರ್‌ ಅವರ ನಡುವೆ ಟಿಕೆಟ್‌ಗಾಗಿ ತೀವ್ರ ಸ್ಪರ್ಧೆ ಏರ್ಪಟ್ಟಿತ್ತು. ಅಂತಿಮವಾಗಿ ಪಕ್ಷದ ವರಿಷ್ಠರು ಮಾನೆ ಅವರಿಗೇ ಟಿಕೆಟ್‌ ನೀಡಿ  ಆದೇಶ ಹೊರೆಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು