ಶುಕ್ರವಾರ, ಅಕ್ಟೋಬರ್ 22, 2021
29 °C

ಹಾನಗಲ್, ಸಿಂದಗಿ ಉಪ ಚುನಾವಣೆ: ಶಿವರಾಜ ಸಜ್ಜನ್, ರಮೇಶ ಭೂಸನೂರಗೆ ಬಿಜೆಪಿ ಟಿಕೆಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಜ್ಯದ ಹಾನಗಲ್ ಹಾಗೂ ಸಿಂದಗಿ ವಿಧಾನಸಭೆ‌ ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಹಾನಗಲ್‌ನಲ್ಲಿ ವಿಧಾನ ಪರಿಷತ್‌ನ ಮಾಜಿ ಸದಸ್ಯ ಶಿವರಾಜ ಸಜ್ಜನ್ ಅವರನ್ನು ಹಾಗೂ ಸಿಂದಗಿಯಲ್ಲಿ ಮಾಜಿ ಶಾಸಕ ರಮೇಶ ಭೂಸನೂರ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ.

ಸಿಂದಗಿ ಕ್ಷೇತ್ರಕ್ಕೆ ರಮೇಶ ಭೂಸನೂರ ಅವರಿಗೆ‌ ನಿರೀಕ್ಷೆಯಂತೆ‌ ಟಿಕೆಟ್ ನೀಡಲಾಗಿದೆ.

ಹಾನಗಲ್ ನಲ್ಲಿ ಸಂಸದ ಶಿವಕುಮಾರ ಉದಾಸಿ ಅವರ ಪತ್ನಿ ರೇವತಿ ಅವರಿಗೆ ಟಿಕೆಟ್ ನೀಡಬಹುದು ಎಂಬ ನಿರೀಕ್ಷ ಹುಸಿಯಾಗಿದೆ.

ಎರಡೂ ಕ್ಷೇತ್ರಗಳ ಅಕ್ಟೋಬರ್ 30ರಂದು ಮತದಾನ ನಡೆಯಲಿದ್ದು, ನವೆಂಬರ್ 2ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು